ನವದೆಹಲಿ (ಡಿ. 08)  ಮದುವೆಗೆ ಮೂರು ದಿನ ಇದ್ದಾಗ ವರನ ಮರ್ಮಾಂಗವನ್ನೇ ಕತ್ತರಿಸಿದ್ದ ಸುದ್ದಿಯನ್ನು ನೋಡಿದ್ದೇವು.  ಕಮದುವೆ ಮೆರವಣಿಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ವರನ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾನೆ.

ಹೊರಗಿನ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ವಿವಾಹ ಮೆರವಣಿಗೆಯಲ್ಲಿ 27 ವರ್ಷದ ವರನ ಮೇಲೆ ಗುಂಡಿನ ದಾಳಿಯಾಗಿದೆ. ಗಂಭೀರ ಗಾಯಗೊಂಡಿದ್ದ ವರ ರಾಮನ್ ಗೆ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮದುವೆಗೆ ಮೂರು ದಿನ ಇದ್ದಾಗ ವರನ ಮರ್ಮಾಂಗವನ್ನೇ ಕತ್ತರಿಸಿದ ಫ್ರೆಂಡ್ಸ್

ದೆಹಲಿ  ಹೊರವಲಯದ  ಹಿರಾನ್ ಕುಡ್ನಾ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು  ಮೆರವಣಿಗೆ ರಥದಲ್ಲಿ ಕುಳಿತಿದ್ದ ವರನ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.

ಸಂಬಂಧಿಕರು ಹಲ್ಲೆಕೋರರನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.  ಘಟನೆಗೆ ಏನು ಕಾರಣ ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ.