Asianet Suvarna News Asianet Suvarna News

'ಬಟ್ಟೆ ಧರಿಸಿದ್ದಾಗ ಖಾಸಗಿ ಅಂಗ ಮುಟ್ಟಿದರೆ ಲೈಂಗಿಕ ದೌರ್ಜನ್ಯ ಅಲ್ಲ'

ಬಟ್ಟೆ ಧರಿಸಿದ್ದಾಗ ಖಾಸಗಿ ಅಂಗ ಮುಟ್ಟಿದರೆ ದೌರ್ಜನ್ಯ ಅಲ್ಲ/ ವ್ಯಕ್ತಿಯೊಬ್ಬನ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್/ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣ

Groping a minor breast without skin to skin contact is not sexual assault says Bombay HC mah
Author
Bengaluru, First Published Jan 24, 2021, 11:25 PM IST

ಮುಂಬೈ( ಜ. 24)  ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಬಾಂಬೆ ಹೈಕೋರ್ಟ್ ಮಹತ್ವದ ಸಂಗತಿಯೊಂದನ್ನು ಹೇಳಿದೆ.   ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಅದು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್, ದೇಹ ತಡವುವುದು, ಸವರುವುದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ. ಲೈಂಗಿಕ ಉದ್ದೇಶವನ್ನಿಟ್ಟುಕೊಂಡು ನೇರವಾಗಿ ದೇಹಸಂಪರ್ಕ ಮಾಡುವುದು, ಚರ್ಮದಿಂದ ಚರ್ಮಕ್ಕೆ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ ಎಂದು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದು  ಹೇಳಿದೆ.

ಮಲತಾಯಿಯ ಮೇಲೆ ಮೃಗದಂತೆ ಎರಗಿದ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿದ್ದವನ ಅರ್ಜಿ ವಿಚಾರಣೆಗೆ  ಮಾಡಿದ ನ್ಯಾಯಾಧೀಶರಾದ ಪುಷ್ಪಾ ಗನೇಡಿವಾಲಾ ಅವರು,ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆ ಅಥವಾ ಖಾಸಗಿ ಅಂಗ  ಮುಟ್ಟಿದರೆ ಅಥವಾ ಅವರ ಕೈ ತಾಗಿದರೆ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ವ್ಯಕ್ತಿ ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಮಾತ್ರ ಪ್ರಕರಣ ದಾಖಲು ಮಾಡಿಕೊಳ್ಳಬಹುದು ಎಂದಿದೆ.

 ಆರೋಪಿಯು 12 ವರ್ಷದ ಬಾಲಕಿಯ ಸ್ತನವನ್ನು ಸ್ಪರ್ಶ ಮಾಡಿದ್ದಾನೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರು ದಾಖಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಬಾಲಕಿಯ ಬಟ್ಟೆಯನ್ನು ವ್ಯಕ್ತಿ ತೆಗೆದಿರಲಿಲ್ಲ ಹಾಗಾಗಿ ಲೈಂಗಿಕ ದೌರ್ಜನ್ಯದ  ಉದ್ದೇಶ ಇರಲಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಬಗ್ಗೆ ಸಾಮಾಜಿಕ ತಾಣದಲ್ಲಿ ಚರ್ಚೆಗಳು ಆಗಿದೆ.

Follow Us:
Download App:
  • android
  • ios