Asianet Suvarna News Asianet Suvarna News

ಅತಿಥಿ ಶಿಕ್ಷಕನ ಅಮಾನವೀಯ ದಾಳಿ, ಕಿಮ್ಸ್‌ನಲ್ಲಿರುವ ಗಾಯಾಳು ಅತಿಥಿ ಶಿಕ್ಷಕಿಯ ಆರೋಗ್ಯ ವಿಚಾರಿಸಿದ ಶಿಕ್ಷಣ ಸಚಿವ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತಿಥಿ ಶಿಕ್ಷಕಿ ಗೀತಾ ಬಾರಕೇರ ಅವರ ಆರೋಗ್ಯವನ್ನು   ಸಚಿವ ಬಿ.ಸಿ.ನಾಗೇಶ್ ಅವರು ವಿಚಾರಿಸಿದರು. 

guest teacher killed student in gadag Education Minister BC Nagesh meet injured guest teacher in Kims gow
Author
First Published Dec 20, 2022, 8:38 PM IST

ಹುಬ್ಬಳ್ಳಿ (ಡಿ.20): ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತಿಥಿ ಶಿಕ್ಷಕಿ ಗೀತಾ ಬಾರಕೇರ ಅವರ ಆರೋಗ್ಯವನ್ನು  ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ‌ ಸಚಿವ ಬಿ.ಸಿ.ನಾಗೇಶ್ ಅವರು ವಿಚಾರಿಸಿದರು. 

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳು ಶಿಕ್ಷಕಿಯ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೇ ಶಿಕ್ಷಕಿಯ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಆರೋಪಿ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ಬಾಲಕ  ಭರತ್ ಮೇಲೆ ಡಿಸೆಂಬರ್ 19 ಬೆಳಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಬಾರಕೇರ ಅವರ ಮೇಲೂ ಸಲಾಕೆಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಭರತ್ ಮೃತಪಟ್ಟಿದ್ದಾನೆ. ಶಿಕ್ಷಕಿ ಗೀತಾ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಶಿಕ್ಷಕನ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

'ಶಾಲೆಯಲ್ಲಿ ನಡೆದಿರುವ ಈ ಘಟನೆ ಅತ್ಯಂತ ದುರಾದೃಷ್ಟಕರ. ಶಾಲೆಯ ಆವರಣದಲ್ಲಿ ಇಂತಹ ಘಟನೆಗಳನ್ನು ಊಹಿಸಲು ಅಸಾಧ್ಯ. ಘಟನೆಯಿಂದ ಆತಂಕಗೊಂಡಿರುವ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಕೌನ್ಸಿಲಿಂಗ್ ಮಾಡಿ ಧೈರ್ಯ ತುಂಬಲಾಗುತ್ತದೆ. ಘಟನೆಗೆ ಕಾರಣ ಏನು ಎಂಬುದು ಆರೋಪಿಯ ಬಂಧನದ ಬಳಿಕ ತಿಳಿದು ಬರಲಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

Gadag Crime: ಶಾಲೆಯಲ್ಲಿಯೇ 4ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಅತಿಥಿ ಶಿಕ್ಷಕ 

ಘಟನೆ ಹಿನ್ನೆಲೆ: ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಪ್ರಾರ್ಥನೆ ಮುಗಿದ ನಂತರ ಅದೇ ಗ್ರಾಮದ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ 4ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಭರತ ಯಲ್ಲಪ್ಪ ಬಾರಕೇರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಬಾಲಕನ ಕಾಲು ಹಿಡಿದು ಸುತ್ತು ಹಾಕುತ್ತಾ ಗೋಡೆಗೆ ಎಸೆದ ಶಿಕ್ಷಕ, ನಂತರ ಆತನನ್ನು ಮತ್ತೆ ಮೊದಲನೇ ಮಹಡಿಯ ಮೇಲಿಂದ ತಲೆ ಕೆಳಗೆ ಮಾಡಿ ಕೆಳಗೆಸೆದಿದ್ದಾನೆ.

Bengaluru Crime: ಸುಂದರ ಕುಟುಂಬಕ್ಕೆ ಬಡತನದ ಶಾಪ: ಮಗಳಿಗೆ ವಿಷವುಣಿಸಿ ಆತ್ಮಹತ್ಯೆಗೆ

ಇದನ್ನು ನೋಡಿದ ಅದೇ ಗ್ರಾಮದ ಹಾಗೂ ಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ, ವಿದ್ಯಾರ್ಥಿಯ ತಾಯಿ ಗೀತಾ ಯಲ್ಲಪ್ಪ ಬಾರಕೇರ ಆಘಾತ, ಆಕ್ರೋಶಗೊಂಡು ಬಂದು ‘ನನ್ನ ಮಗನಿಗೆ ಏಕೆ ಹೊಡೆಯುತ್ತಿರುವೆ’ ಎಂದು ಪ್ರಶ್ನಿಸಿದ್ದಾಳೆ. ಕುಪಿತಗೊಂಡ ಮುತ್ತಪ್ಪ ಅವಳ ಮೇಲೆ ಪಿಕಾಸಿಯಿಂದ ಹಲ್ಲೆ ಮಾಡಿದ್ದು, ಇದನ್ನು ತಡೆಯಲು ಬಂದ ಮತ್ತೊಬ್ಬ ಶಿಕ್ಷಕ ಸಂಗನಗೌಡ ಚಂದ್ರಗೌಡ ಪಾಟೀಲ ಮೇಲೂ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಶಾಲಾ ಮುಖ್ಯಶಿಕ್ಷಕ ಬಸವರಾಜ ಯಾವಗಲ್ಲ ಹಲ್ಲೆ ತಡೆಯಲು ಯತ್ನಿಸಿದ್ದು, ಅವರ ಮೇಲೂ ಹಲ್ಲೆಗೆತ್ನಿಸಿದ ಆರೋಪಿ ಮುತ್ತಪ್ಪ ನಂತರ ಪರಾರಿಯಾಗಿದ್ದಾನೆ.

Follow Us:
Download App:
  • android
  • ios