ಹಾಸನ ಲೈಂಗಿಕ ದೌರ್ಜನ್ಯ ಕೇಸ್; ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು
ಹೊಳೆನರಸೀಪುರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ನ್ಯಾಲಯದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರು (ಮೇ 16): ಹಾಸನದ ಹೊಳೆನರಸೀಪುರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ನ್ಯಾಲಯದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಶಾಸಕ ಹೆಚ್.ಡಿ. ರೇವಣ್ಣ ಇಬ್ಬರೂ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆಯೊಬ್ಬರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ಕೋರ್ಟ್ ನ ನ್ಯಾ.ಜೆ.ಪ್ರೀತ್ ಅವರು ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ, ಜಾಮೀನಿನ ಜೊತೆಗೆ ಕೆಲವು ಷರತ್ತುಗಳನ್ನು ಕೂಡ ವಿಧಿಸಲಾಗಿದೆ. 5 ಲಕ್ಷ ಬಾಂಡ್ ನೀಡಬೇಕು. ಒಬ್ಬರ ವೈಯಕ್ತಿಕ ಶ್ಯೂರಿಟಿ ನೀಡಬೇಕು ಎಂದು ಷರತ್ತುಗಳನ್ನು ಕೂಡ ಒಡ್ಡಲಾಗಿದೆ.
ಸಾಕ್ಷಿಗಳೇ ಇಲ್ಲದೆ ರೇವಣ್ಣರನ್ನು ಅರೆಸ್ಟ್ ಮಾಡಿತ್ತಾ ಎಸ್ಐಟಿ? ಕೋರ್ಟ್ ಹಾಲ್‌ನಲ್ಲಿ ನಡೆದದ್ದಾದರೂ ಏನು?
ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಮಹಿಳೆಯೊಬ್ಬರು ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದರಲ್ಲಿ ರೇವಣ್ಣ ಎ1 ಆರೋಪಿ ಆಗಿದ್ದರು. ಈ ಕೇಸ್‌ನಲ್ಲಿ ಬೇಲೆಬಲ್ ಪ್ರಕರಣ ದಾಖಲಾಗಿದ್ದರಿಂದ ಸುಲಭವಾಗಿ ನಿರೀಕ್ಷಣಾ ಜಾಮೀನು ಮಂಜೂರಾಗುತ್ತಿತ್ತು. ಆದರೆ, ಅವರ ವಿರುದ್ಧ ಕೆ.ಆರ್.ನಗರದಲ್ಲಿ ದಾಖಲಾದ ಕಿಡ್ನಾಪ್ ಕೇಸ್ ಕೂಡ ಸೇರ್ಪಡೆ ಮಾಡಿದ್ದರಿಂದ ಅವರು ಅನಿವಾರ್ಯವಾಗಿ ಜೈಲು ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲು ಶಿಕ್ಷೆಯನ್ನೂ ಅನುಭವಿಸಿ ಬಂದಿದ್ದಾರೆ. ಆದರೆ, ಈಗ ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದ ರೇವಣ್ಣ ಅವರ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಕೊಡಲಾಗಿದೆ.
ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ: ಜಿಟಿ ದೇವೇಗೌಡ
ಕೆ.ಆರ್.ನಗರ ಕಿಡ್ನಾಪ್ ಕೇಸ್ ಜಾಮೀನು ಮೇಲೆ ಹೊರಗಿದ್ದ ರೇವಣ್ಣ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಕೆ.ಆರ್. ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಡಿ ಬಂಧಿಸಲಾಗಿತ್ತು. ಆದರೆ, ಮಹಿಳೆ ತನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ ಎಂಬ ಹೇಳಿಕೆ ನಿಡಿದ್ದರಿಂದ ರೇವಣ್ಣ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದ್ದರಿಂದ ರೇವಣ್ಣ ಜಾಮೀನಿನ ಮೇಲೆಯೇ ಹೊರಗಿದ್ದರು. ಆದರೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ನೀಡಬಹುದಾದ ಕೇಸ್‌ಗಳಿದ್ದರಿಂದ ಸುಲಭವಾಗಿ ಜಾಮೀನು ಲಭ್ಯವಾಗಿದೆ. ಆದರೆ, ಪುನಃ ನಾಳೆ ಮಧ್ಯಾಹ್ನ ಮತ್ತೊಂದು ಪ್ರಕರಣದ ಅರ್ಜಿ ವಿಚಾರಣೆ ನಡೆಯಲಿದೆ.