Haveri student kidnap case: ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾಡಿನಲ್ಲಿ ಅತ್ಯಾ೧ಚಾರವೆಸಗಲಾಗಿದೆ. ಈ ಕೃತ್ಯದ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಹಾವೇರಿ (ಸೆ.28): ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ ಕೋರ್ಸ್‌ನ ಮೊದಲನೇ ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾಡಿನಲ್ಲಿ ಅತ್ಯಾ೧ಚಾರವೆಸಗಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಅತ್ಯಾ೧ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಕಿಡ್ನ್ಯಾಪ್!
ಸೆಪ್ಟೆಂಬರ್ 13ರಂದು ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಅಭಿಷೇಕ್ ಲಮಾಣಿ ಮತ್ತು ಪ್ರವೀಣ್ ಲಮಾಣಿ ಎಂಬ ಇಬ್ಬರು ಯುವಕರು ಕಾರಿನಲ್ಲಿ ಅಪಹರಿಸಿದ್ದಾರೆ. ಬಾಯಿಗೆ ಬಟ್ಟೆ ಕಟ್ಟಿ, ಕಾಡಿನ ಭಾಗಕ್ಕೆ ಕರೆದೊಯ್ದು ವಿದ್ಯಾರ್ಥಿನಿಯ ಮೇಲೆ ಅತ್ಯಾ೧ಚಾರವೆಸಗಿದ್ದಾರೆ.
ಘಟನೆ ಬಗ್ಗೆ ಬಾಯಿಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಬೆದರಿಕೆ:
ಇದೇ ವೇಳೆ, ಘಟನೆಯ ವಿಡಿಯೋ ಚಿತ್ರೀಕರಿಸಿರುವು ದುರುಳರು, ಈ ಘಟನೆ ಬಗ್ಗೆ ಮನೆಯಲ್ಲಾಗಲಿ, ಯಾರಿಗಾದರೂ ತಿಳಿಸಿದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ವಿದ್ಯಾರ್ಥಿನಿಗೆ ಆರೋಪಿಗಳು ಬೆದರಿಕೆ ಧಮಕಿ ಹಾಕಿದ್ದಾರೆ. ಕೆಲವು ದಿನಗಳಿಂದ ಈ ಇಬ್ಬರು ಯುವಕರು ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾದ ಬಳಿಕ ತಡಸ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿ ಅಭಿಷೇಕ್ ಲಮಾಣಿಯನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪ್ರವೀಣ್ ಲಮಾಣಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ತಡಸ ಪೊಲೀಸ್ ಠಾಣೆಯಲ್ಲಿ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.
