ಮಾನಸಿಕ ಖಿನ್ನತೆ: ರೈಫಲ್‌ನಿಂದ ಶೂಟ್ ಮಾಡಿಕೊಂಡು ಪೇದೆ ಆತ್ಮಹತ್ಯೆ!
ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನಲ್ಲಿ ನಡೆದಿದೆ. ನಗರದ ಜಿಲ್ಲಾಡಳಿತ ಭವನದಲ್ಲಿ ಖಜಾನೆ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ, ಹೆಡ್ ಕಾನ್‌ಸ್ಟೇಬಲ್ ಕಿರಣ್ ಕುಮಾರ್ ಕೊಪ್ಪದ್ 45 ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗದಗ (ಜೂ.16): ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನಲ್ಲಿ ನಡೆದಿದೆ. ನಗರದ ಜಿಲ್ಲಾಡಳಿತ ಭವನದಲ್ಲಿ ಖಜಾನೆ ವಿಭಾಗದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ, ಹೆಡ್ ಕಾನ್‌ಸ್ಟೇಬಲ್ ಕಿರಣ್ ಕುಮಾರ್ ಕೊಪ್ಪದ್ 45 ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಖಜಾನೆ ಎಲ್ಲಾ ಬಾಗಿಲುಗಳನ್ನು ಹಾಕಿಕೊಂಡು, ಕುರ್ಚಿ ಮೇಲೆ ಕುಳಿತು, ಕೈಯಲ್ಲಿದ್ದ 303 ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ 9 ಗಂಟೆಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗಬೇಕಾಗಿದ್ದ ಕಿರಣ್ ಅವರು ಕಚೇರಿಯಲ್ಲೇ ಫೈರ್ ಮಾಡಿಕೊಂಡಿದ್ದಾರೆ. ನೈಟ್ ಡ್ಯೂಟಿ ಮಾಡುವ ಇನ್ನೊರ್ವ ಸಿಬ್ಬಂದಿ ಕಚೇರಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಖಜಾನೆಯ ಎಲ್ಲಾ ಬಾಗಿಲು ಹಾಕಿದ್ದರಿಂದ ನೈಟ್ ಡ್ಯೂಟಿ ಬಂದ ಸಿಬ್ಬಂದಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
Victoria Doctor Suicide: ಅಪಾರ್ಟ್‌ಮೆಂಟ್‌ನಿಂದ ಜಿಗಿದು ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಆತ್ಮಹತ್ಯೆ
ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ, ರೈಫಲ್ ಕುತ್ತಿಗೆ ಇಟ್ಟಿಕೊಂಡು ಕಾಲಿನಿಂದ ಟ್ರಿಗರ್ ಪ್ರೆಸ್ ಮಾಡಿ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಗುಂಡು ಕುತ್ತಿಗೆಯನ್ನು ಸೀಳಿಕೊಂಡು ಗೋಡೆಗೆ ಹೋಗಿ ಬಡಿದಿದ್ದು, ಪೇದೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹ ಹಾಗೂ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಶಿವಾನಂದ ಪಟ್ಟಣಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಮನೆಗೆ ಫೋನ್ ಮಾಡಲು ಬಿಡಲಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ: ತಲಪಾಡಿಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿದ್ಯಾಸಂಸ್ಥೆ, ಪ್ರಾಂಶುಪಾಲರು ಹಾಗೂ ಹಾಸ್ಟೆಲ್ ವಾರ್ಡನ್ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಹೊಸಕೋಟೆ ನಿವಾಸಿ ರಮೇಶ್ ಹಾಗೂ ಮಂಜುಳಾ ದಂಪತಿ ಪುತ್ರ ಪೂರ್ವಜ್ (14) ಮೃತ ವಿದ್ಯಾರ್ಥಿ.
Davanagere; ಪತಿಯ ಕಿರುಕುಳಕ್ಕೆ ಬೇಸತ್ತು 11 ತಿಂಗಳ ಮಗು ಸಹಿತ ಅಮ್ಮ ಆತ್ಮಹತ್ಯೆ!
ಜೂ. 11ರಂದು ತಾಯಿ ಮಂಜುಳಾ ಅವರ ಹುಟ್ಟು ಹಬ್ಬವಿದ್ದು, ಅದಕ್ಕಾಗಿ ಶುಭಾಶಯ ಕೋರಲು ಮೊಬೈಲ್ ಕೇಳಿದ್ದಾನೆ. ವಾರ್ಡನ್ ನೀಡದೇ ಇರುವುದರಿಂದ ನೊಂದು ಬಾಲಕ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ. ರುಕುಳದಿಂದಲೇ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ದೂರು ನೀಡಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.