Hiriyur road accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಮೂಲದವರೆಂದು ಗುರುತಿಸಲಾದ ಮೃತರ ದುರ್ಘಟನೆಗೆ ಚಾಲಕನ ನಿಯಂತ್ರಣ ತಪ್ಪಿದ್ದೇ ಕಾರಣ ಎಂದು ಹೇಳಲಾಗಿದೆ. ಕಳವಳ ಮೂಡಿಸಿದೆ.
ಚಿತ್ರದುರ್ಗ, (ಅ.3): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ಶುಕ್ರವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಮಲ್ಲಮ್ಮ (26), ಸರೋಜಮ್ಮ (25) ಹಾಗೂ ಒಂದು ಪುಟ್ಟ ಮಗು ಮೃತ ದುರ್ದೈವಿಗಳು. ಮೃತರೆಲ್ಲರೂ ಯಾದಗಿರಿ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ, ತೀರ್ಪಿನ ವಿಷಯ ತಿಳಿದು ತಾಯಿ ಕಣ್ಣೀರು!
ರಸ್ತೆ ಅಪಘಾತ ಹೆಚ್ಚಳ ಆತಂಕ:
ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನೇದಿನೆ ಕಡಿಮೆ ಆಗುವ ಬದಲು ಹೆಚ್ಚಳವಾಗುತ್ತಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ. ವೇಗದ ಚಾಲನೆ, ರಸ್ತೆಗಳ ಕಳಪೆ ಗುಣಮಟ್ಟ, ಸುರಕ್ಷತಾ ಕ್ರಮಗಳ ಕೊರತೆಯೇ ಇಂತಹ ದುರಂತಗಳಿಗೆ ಪ್ರಮುಖ ಕಾರಣವಾಗಿವೆ.
ಇದನ್ನೂ ಓದಿ: ಯಾದಗಿರಿ: ಇ-ಖಾತಾ ಮಾಡಿಕೊಡಲು ₹8000 ಲಂಚ, ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್
ಸದ್ಯ ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಅಪಘಾತಗಳನ್ನ ತಪ್ಪಿಸಬಹುದಾಗಿದೆ.
