Asianet Suvarna News Asianet Suvarna News

ಸಾತನೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌-ಕಾರು ನಡುವೆ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು

ರಾಮನಗರ ಜಿಲ್ಲೆಯ ಸಾತನೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 

Horrible accident between KSRTC bus and car near Kanakapura many dies on spot sat
Author
First Published Aug 28, 2023, 6:09 PM IST

ರಾಮನಗರ (ಆ.28): ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ತವರು ಕ್ಷೇತ್ರದವಾದ ಕನಕಪುರ ವಿಧಾನಸಭಾ ಕ್ಷೇತ್ರದ ಸಾತನೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 

ಇನ್ನು ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲೀಸ್ ಕಾರಿನ ನಡುವೆ ಸಂಜೆ 4 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಕ್ವಾಲೀಸ್ ವಾಹನದಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಂತೆ ಕಾರಿನ ಹಿಂಬದಿ ಸೀಟಿನಲ್ಲಿದ್ದ ಹಲವು ಜನರಿಗೆ ಗಂಭೀರ ಗಾಯಗಳಾಗುವೆ. ಕನಕಪುರ ತಾಲೂಕಿನ ಸಾತನೂರು ಬಳಿಯ ಕೆಮ್ಮಾಳೆ ಗೇಟ್ ಬಳಿ ದುರ್ಘಟನೆ ಸಂಭವಿಸಿದೆ. ಮಹದೇಶ್ವರ ಬೆಟ್ಟದಿಂದ ವಾಪಾಸ್ ಬರುತ್ತಿದ್ದ ಕ್ವಾಲೀಸ್ ಕಾರು ವೇಗವಾಗಿ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇನ್ನು ಬಸ್‌ನಲ್ಲಿದ್ದ ಚಾಲಕ ಸೇರಿದಂತೆ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಾತನೂರು ಪೊಲೀಸರ‌ ದೌಡಾಯಿಸಿದ್ದಾರೆ.

ಕರ್ನಾಟಕಕ್ಕೆ ಹಿನ್ನಡೆ , ತಮಿಳುನಾಡಿಗೆ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಕಾರಿನಲ್ಲಿದ್ದ ಎಲ್ಲರೂ ಸ್ನೇಹಿತರಾಗಿದ್ದು, ಕಾರನ್ನು ಮಾಡಿಕೊಂಡು ಜೊತೆಗೂಡಿ ಮಹದೇಶ್ವರ ಬೆಟ್ಟಕ್ಕೆ ಮಲೆ ಮಹದೇಶ್ವರನ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಅಲ್ಲಿಂದ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರನ್ನು ನಾಗೇಶ್, ಪುಟ್ಟರಾಜು, ಜೋತಿರ್ಲಿಂಗಪ್ಪ (ಕಾರು ಮಾಲೀಕ), ಗೋವಿಂದ, ಕುಮಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರು ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕಾರು ಮೈಸೂರು ಕಡೆಯಿಂದ ಬರುತ್ತಿತ್ತು. ಬಸ್‌ ಸಾತನೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಮುಖಾಮುಖಿ ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು.

Bengaluru: ಬಿಬಿಎಂಪಿ ಬೆಂಕಿ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್‌ ಸ್ಥಿತಿ ಗಂಭೀರ

ಕಾರ್ಯಾಚರಣೆಗೆ ಹರಸಾಹಸ: ಇನ್ನು ಕಾರು ಹಾಗೂ ಬಸ್‌ ಮುಖಾಮುಖಿ ಡಿಕ್ಕಿಯಿಂದಾಗಿ ಕಾರಿನ ಅರ್ಧ ಭಾಗ ಬಸ್‌ನ ಅಡಿಗೆ ತೂರಿಕೊಂಡು ಹೋಗಿದೆ. ಇನ್ನು ಮೃತ ದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಜೆಸಿಬಿ ಹಾಗೂ ಕ್ರೇನ್‌ಗಳನ್ನು ತರಿಸಲಾಗಿದೆ. ಕಾರಿನ ಭಾಗಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದರಿಂದ ಮೃತ ದೇಹಗಳನ್ನು ಹೊರಗೆ ತೆಗೆಯಲು ಕಷ್ಟವಾಗುತ್ತಿದೆ, ಒಂದು ಕಡೆ ಜೆಸಿಬಿಯಿಂದ ಕಾರಿನ ಕೆಲ ಭಾಗಗಳನ್ನು ಹಿಡಿದುಕೊಂಡು, ಕ್ರೇನ್‌ನಿಂದ ಇನ್ನೊಂದು ಭಾಗದಲ್ಲಿ ಹಗ್ಗವನ್ನು ಕಟ್ಟಿ ಎಳೆಯಲಾಗುತ್ತಿದೆ. ಹೀಗೆ, ಕಾರಿನ ನಜ್ಜುಗುಜ್ಜಾದ ಭಾಗವನ್ನು ಅಗಲಿಸಿ, ಪ್ರತ್ಯೇಕಗೊಳಿಸಿ ಮೃತ ದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಇನ್ನು ಕಾರಿನ ಹಿಂಭಾಗದಲ್ಲಿ ಕುಳಿತು ಗಂಭೀರ ಗಾಯಗೊಂಡವರನ್ನು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಗಾಯಾಳುಗಳನ್ನು ಆಂಬುಲೆನ್ಸ್‌ ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. 

Follow Us:
Download App:
  • android
  • ios