Asianet Suvarna News Asianet Suvarna News

ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಗುಂಡ್ಲುಪೇಟೆಯಲ್ಲಿ ಭೀಕರ ರಸ್ತೆ ಅಪಘಾತ: ಆಹಾರ ನಿರೀಕ್ಷಕ ಸಾವು

ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
 

Horrible road accident while coming back from Janaspandana program Food worker dies gvd
Author
First Published Jun 28, 2024, 10:22 PM IST

ಚಾಮರಾಜನಗರ (ಜೂ.28): ಹಂಗಳ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆಹಾರ ನಿರೀಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಆಹಾರ ಶಿರಸ್ತೇದಾರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಸವಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ-67ರಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ತಾಲೂಕಿನ ಅಂಕಹಳ್ಳಿ ಗ್ರಾಮದ ಪಟ್ಟಣ ನಿವಾಸಿ ಆಹಾರ ನಿರೀಕ್ಷಕ ನಾಗೇಂದ್ರಪ್ಪ(46) ಮೃತರು. ಮೈಸೂರು ನಿವಾಸಿ ಆಹಾರ ಶಿರಸ್ತೇದಾರ್ ರಮೇಶ್(52) ತೀವ್ರವಾಗಿ ಗಾಯಗೊಂಡವರು. ಇಬ್ಬರು ಬೈಕ್ ನಲ್ಲಿ ಹಂಗಳ ಗ್ರಾಮದಿಂದ ಬರುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಯಿಂದ ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿದೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿದ ವೈದ್ಯರು ನಾಗೇಂದ್ರಪ್ಪ ಮೃತಪಟ್ಟಿರುವುದನ್ನು ಧೃಡಪಡಿಸಿದರು. 

ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಸಚಿವ ಚಲುವರಾಯಸ್ವಾಮಿ

ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸಲುವಾಗಿ ಶವಗಾರದಲ್ಲಿ ಇರಿಸಲಾಗಿದೆ. ಆಹಾರ ನಿರೀಕ್ಷಕ ರಮೇಶ್ ಅವರಿಗೆ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೋಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಪರಶಿವಮೂರ್ತಿ, ಪಿಎಸ್‍ಐ ಎಂ.ಎಸ್.ಶಿವಶಂಕರಪ್ಪ, ಜಯರಾಂ ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ಮತ್ತು ಬೈಕ್ ವಶಕ್ಕೆ ಪಡೆಕೊಂಡು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios