ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ವಾಪಸಾಗುತ್ತಿದ್ದಾಗ ಹುಲ್ಲು ತುಂಬಿದ ಟ್ರ್ಯಾಕ್ಟರ್‌ಗೆ ಅವರ ಕಾರು ಡಿಕ್ಕಿ ಹೊಡೆದಿದ್ದು, ಪತಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ. 

ರಾಯಚೂರು (ನ.30): ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಲ್ಲು ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ:

ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಾವರಗೇರಾ ಶಶಿಧರ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅಕ್ಕಮಹಾದೇವಿ (36) ಎಂದು ಗುರುತಿಸಲಾಗಿದೆ.

ಹುಲ್ಲು ತುಂಬಿದ್ದ ಟ್ರಾಕ್ಟರ್‌ಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಉಪನ್ಯಾಸಕಿ ಅಕ್ಕಮಹಾದೇವಿಯವರು ತಮ್ಮ ಸಂಬಂಧಿಕರ ವಿವಾಹ ಸಮಾರಂಭವೊಂದಕ್ಕೆ ಹಾಜರಾಗಿ, ವಾಪಸ್ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಪತಿ, ಮಕ್ಕಳಿಗೆ ಗಾಯ

ಅಪಘಾತದಲ್ಲಿ ಉಪನ್ಯಾಸಕಿ ಅಕ್ಕಮಹಾದೇವಿಯವರು ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಬಗ್ಗೆ ತನಿಖೆ ತನಿಖೆ ನಡೆಸುತ್ತಿದ್ದಾರೆ.