Asianet Suvarna News Asianet Suvarna News

ಹುಬ್ಬಳ್ಳಿ: ಅಂಜಲಿ ಹಂತಕನನ್ನ ಬಂಧಿಸಿದ್ದೇ ಬಲು ರೋಚಕ..!

ಆಟೋ ಚಾಲಕ ವಿಶ್ವನಾಥ ಅಲಿಯಾಸ್ ಗಿರೀಶ ಸಾವಂತ ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ವೀರಾಪುರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ನಾಲೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. 

Hubballi Anjali Murder Accused arrested in Davangere grg
Author
First Published May 17, 2024, 7:26 AM IST

ಹುಬ್ಬಳ್ಳಿ(ಮೇ.17):  ಇಲ್ಲಿನ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ (20) ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು 48 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಿರುವ ಪೊಲೀಸರು ರಾತ್ರಿಯೇ ಹುಬ್ಬಳ್ಳಿಗೆ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಟೋ ಚಾಲಕ ವಿಶ್ವನಾಥ ಅಲಿಯಾಸ್ ಗಿರೀಶ ಸಾವಂತ (21) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ವೀರಾಪುರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ನಾಲೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಚಲನವಲನಗಳು ಹುಬ್ಬಳ್ಳಿ ಗೋಕುಲ್ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದು ದಾವಣೆಗೆರೆ, ಶಿವಮೊಗ್ಗ, ಮೈಸೂರು ಸೇರಿದಂತೆ ವಿವಿಧೆಡೆ ಪೊಲೀಸರ ತಂಡ ತೆರಳಿ ಶೋಧ ಕಾರ್ಯ ನಡೆಸಿತ್ತು. 

ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!

ಆರೋಪಿಯು ದಾವಣಗೆರೆಯಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯನ್ನು ತಡರಾತ್ರಿಯೇ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಂಜಲಿ ಹಂತಕ ಬಂಧನ ಅತ್ಯಂತ ರೋಚಕ..!

ಅಂಜಲಿ ಕೊಲೆ ಆರೋಪಿ ಗಿರೀಶ್ ಸಾವಂತ್ ಕೊಲೆ ಮಾಡಿ ಪರಾರಿಯಾಗುವಾಗ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದನಂತೆ. ಆರೋಪಿ ಗಿರೀಶ್ ಸಾವಂತ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಹೀಗಾಗಿ ಆರೋಪಿ ಗಿರೀಶ್‌ಗೆ ರೈಲಿನಲ್ಲಿ ಸಾರ್ವಜನಿಕರು ಥಳಿಸಿದ್ದರು. ಈ ವೇಳೆ  ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದ್ದ ಆರೋಪಿ ಗಿರೀಶ್‌. 

Hubli: ಮಗಳು ನೇಹಾ ಕಳ್ಕೊಂಡ ನೋವಿನಲ್ಲಿಯೇ, ಅಂಜಲಿ ಕುಟುಂಬಕ್ಕೆ 1 ಲಕ್ಷ ರೂ. ನೆರವು ಕೊಟ್ಟ ನಿರಂಜನ ಹಿರೇಮಠ

ತೀವ್ರವಾಗಿ ಗಾಯಗೊಂಡಿದ್ದ ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆ ಆರೋಪಿ ಎಂದು ಆರಂಭದಲ್ಲಿ ತಿಳಿದಿರಲಿಲ್ಲ. ಬಳಿಕ ದಾವಣಗೆರೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದರು.  ಬಳಿಕ ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. 

ಬಳಿಕ ವಶಕ್ಕೆ ಪಡೆದ ಹುಬ್ಬಳ್ಳಿ ಪೊಲೀಸರು ಹುಬ್ಬಳ್ಳಿಗೆ ಕರೆತಂದಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆರೋಪಿ ಗಿರೀಶ್ ಸಾವಂತ್‌ನನ್ನ ದಾಖಲಿಸಲಾಗಿದೆ. ಹು-ಧಾ ಕಮಿಷನರ್ ರೇಣುಕಾ ಸುಕುಮಾರ ಅವರು ಕಿಮ್ಸ್ ಆಸ್ಪತ್ರೆಗೆ ಆಗಮಿಸಲಿದ್ದಾರೆ. 

Latest Videos
Follow Us:
Download App:
  • android
  • ios