ಬೀದರ್(ಡಿ. 13) ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಉಮೇಶ್ ಮಡಿವಾಳ(28), ಅಂಜಲಿ(25) ಆತ್ಮಹತ್ಯೆ ಮಾಡಿಕೊಂಡ ದಂಪತಿ. 6 ತಿಂಗಳ ಹಿಂದೆ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ  ಮಾಡಿಕೊಂಡಿದ್ದು ನಿಖರ ಕಾರಣ ತಿಳಿದು ಬಂದಿಲ್ಲ. ದಂಪತಿ ನಡುವೆ ಮಧ್ಯೆ ಜಗಳ ನಡೆದಿತ್ತು ಎನ್ನಲಾಗುತ್ತಿದೆ.  ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಭಾಷೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರ ವಿಳಂಬ ವಿರೋಧಿಸಿ ಟವರ್ ಏರಿದ ಮಂಡ್ಯದ ರೈತ

ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಮದುವೆಯಾದ ದಿನದಿಂದಲೂ ಗಂಡ-ಹೆಂಡತಿ ನಡುವೆ ಪ್ರತಿ ದಿನ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಗುರುವಾರ ರಾತ್ರಿ ಸಹ ಇಬ್ಬರ ನಡುವೆ ಜಗಳ ನಡೆದಿದೆ. ವಿಕೋಪಕ್ಕೆ ತೆರಳಿ ಇಬ್ಬರು ಜಮೀನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.