ಬೆಂಗಳೂರು [ಡಿ.03]:  ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯೋರ್ವರಯ  ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. 

ನವೆಂಬರ್ 30 ರಂದು ಆಶಾರಾಣಿ [30] ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪತಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾರೆ. 

ಕಳೆದ 6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ ವಿವಾಹವಾಗಿತ್ತು.  ಪತಿ-ಪತ್ನಿ ಇಬ್ಬರು ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇಬ್ಬರೂ ಪೀಣ್ಯದ ಎಸ್ ಆರ್ ಎಸ್ ರಸ್ತೆಯ ಮನೆಯೊಂದರಲ್ಲಿ ವಾಸವಿದ್ದರು. ಆಗಾಗ ದಂಪತಿ ನಡುವೆ ಜಗಳ ನಡೆಯುತಿತ್ತು. ಈ ನಿಟ್ಟಿನಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. 

ಆಶಾರಾಣಿ ಮೃತಪಟ್ಟ ಹಿನ್ನೆಲೆಯಲ್ಲಿ ಆರ್ ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯ ಪತಿ ರವಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.