ಹಾವೇರಿ(ಜ.23): ಪತಿಯೊಬ್ಬ ತನ್ನ ಹೆಂಡತಿಯನ್ನು ಮಚ್ಚಿನಿಂದ ಹಲ್ಲೆಮಾಡಿ ಕೊಲೆಗೈಯಲು ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಕ್ರಾಸ್ ಬಳಿ ಇಂದು(ಶನಿವಾರ) ನಡೆದಿದೆ. 

ಮಹದೇವಕ್ಕ ಎಂಬಾಕೆಯ ಮೇಲೆ ಪತಿ ಮೈಲಾರ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದೊಂದು ತಿಂಗಳಿನಿಂದ ದಂಪತಿ ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

ಬೆಳಗಾವಿ: ಆಸ್ತಿ ವಿವಾದಕ್ಕೆ ಏನೂ ಅರಿಯದ ನಾಲ್ಕು ವರ್ಷದ ಬಾಲಕ ಬಲಿ

ಈ ದಂಪತಿಗಳು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಅರೆಮಲ್ಲಾಪೂರ ಗ್ರಾಮದ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.