ಸಿಂಧನೂರು: ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಪತ್ನಿ ಕೊಂದ ಗಂಡ
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್ಸಪೆಕ್ಟರ್ ರವಿಕುಮಾರ್ ಕಪ್ಪತ್ನವರ್ ತನಿಖೆ ಕೈಗೊಂಡಿದ್ದಾರೆ.
ಸಿಂಧನೂರು(ಮಾ.21): ತಾಲೂಕಿನ ಉಪ್ಪಳ ಗ್ರಾಮದ ಚಿಂಚೇರಿ ಡಿ.ಸೀಮಾದ ಬೀಳು ಹೊಲದಲ್ಲಿ ನಿಂಗಣ್ಣ ಎನ್ನುವ ವ್ಯಕ್ತಿ ಪತ್ನಿ ದೇವೀರಮ್ಮನ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ಕಟ್ಟಿಗೆ ತರಲೆಂದು ಕರೆದುಕೊಂಡು ಹೋಗಿದ್ದ ನಿಂಗಣ್ಣ ಪತ್ನಿ ದೇವೀರಮ್ಮ ಕಟ್ಟಿಗೆ ಕಡಿಯುತ್ತಿದ್ದ ವೇಳೆ ಮಚ್ಚಿನಿಂದ ಆಕೆಯ ಕುತ್ತಿಗೆ ಕತ್ತರಿಸಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ನಂತರ ಅದೇ ಜಾಗದಲ್ಲಿಯೇ ಸಂಜೆಯವರೆಗೆ ಕುಳಿತಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಳ್ಳಲು ಕ್ರಿಮಿನಾಶಕ ಕುಡಿದಿದ್ದಾನೆ. ಕ್ರಿಮಿನಾಶಕ ಕುಡಿದು ಬಳಲಿದ್ದ ಆರೋಪಿಯನ್ನು ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಮೃತ ದೇವೀರಮ್ಮಳಿಗೆ ನಾಲ್ವರು ಮಕ್ಕಳಿದ್ದಾರೆ.
ಬೆಂಗಳೂರು: ಪೊಲೀಸರ ಐಡಿ ತೋರಿಸಿ 1.48 ಲಕ್ಷ ಎಗರಿಸಿದ ಸೈಬರ್ ಚೋರರು..!
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಲ್ ಇನ್ಸಪೆಕ್ಟರ್ ರವಿಕುಮಾರ್ ಕಪ್ಪತ್ನವರ್ ತನಿಖೆ ಕೈಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತಳ ತಂದೆ ನೀಡಿದ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ವೆಂಕಟಪ್ಪ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.