Mandya: ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕೊಲೆಗೈದ ಪಾಪಿ ಪತಿ!
ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕುತ್ತಿಗೆ ಬಿಗಿದು ಮಕ್ಕಳ ಮುಂದೆಯೇ ಪಾಪಿ ಪತಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗಿತಾ (27) ಗಂಡನಿಂದಲೇ ಕೊಲೆಯಾಗಿದ್ದು, ಪತಿ ರವಿ, ಮಕ್ಕಳ ಮುಂದೆಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.
ಮಂಡ್ಯ (ಜು.07): ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿಯ ಕುತ್ತಿಗೆ ಬಿಗಿದು ಮಕ್ಕಳ ಮುಂದೆಯೇ ಪಾಪಿ ಪತಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗಿತಾ (27) ಗಂಡನಿಂದಲೇ ಕೊಲೆಯಾಗಿದ್ದು, ಪತಿ ರವಿ, ಮಕ್ಕಳ ಮುಂದೆಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರವಿ, ಪತ್ನಿಗೆ ಮನೆಯಿಂದ ಹೋಗುವಂತೆ ಹಿಂಸೆ ನೀಡ್ತಿದ್ದ ಎನ್ನಲಾಗಿದೆ. ಸಾಕಷ್ಟು ಬಾರಿ ನ್ಯಾಯ ಪಂಚಾಯಿತಿಯನ್ನು ಗ್ರಾಮದ ಮುಖಂಡರು ನಡೆಸಿದ್ದರು. ನಿನ್ನೆ (ಬುಧವಾರ) ರಾತ್ರಿ ಮಕ್ಕಳಿಗೆ ಪಾನಿಪುರಿ ತಿನಿಸುತ್ತಿದ್ದ ಮತ್ತೆ ಗಂಡ ಹೆಂಡತಿ ನಡುವೆ ಜಗಳ ಆರಂಭವಾಗಿದೆ.
ಬಳಿಕ ಪತ್ನಿ ಯೋಗಿತಾಗೆ ಮನಬಂದಂತೆ ಹೊಡೆದು ರೂಂ ಒಳಗೆ ರವಿಗೌಡ ಎಳೆದೋಯ್ದಿದ್ದಾನೆ. ತಕ್ಷಣ ಜಗಳದ ಬಗ್ಗೆ ಪಕ್ಕದ ಮನೆಯವರಿಗೆ ಮಕ್ಕಳು ವಿಚಾರ ತಿಳಿಸಿದ್ದು, ಅವರು ಬರುವಷ್ಟರಲ್ಲಿ ಪತ್ನಿಯನ್ನು ರವಿ ಕೊಲೆ ಮಾಡಿದ್ದಾನೆ. ಅಲ್ಲದೇ ಈ ವಿಚಾರವನ್ನು ಯಾರಿಗೂ ಹೇಳಬೇಡಿ ಎಂದು ಮಕ್ಕಳಿಗೆ ಹೇಳಿ ರವಿ ಪರಾರಿಯಾಗಿದ್ದಾನೆ. ಇನ್ನು ಮನೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕಣ್ಣ ಮುಂದೆಯೇ ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ. ಸದ್ಯ ಪರಾರಿಯಾಗಿರುವ ರವಿಯನ್ನ ಸ್ಥಳಕ್ಕೆ ಕರೆಸುವಂತೆ ಯೋಗಿತಾ ಪೋಷಕರ ಪಟ್ಟು ಹಿಡಿದಿದ್ದು, ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗುಜರಾತ್‌ನಲ್ಲೂ ಕರ್ನಾಟಕ ಪವರ್ ಶೋ: ವಿಜಯಪುರ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ
ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿ ಐಸಿಯುಗೆ ದಾಖಲು: ನೋಟ್ ಬುಕ್ ತಂದಿಲ್ಲ ಎಂಬ ಕಾರಣಕ್ಕೆ ನಗರದ ಖಾಸಗಿ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಯೊಬ್ಬನಿಗೆ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. ಕಿವಿ ಮತ್ತು ಕಣ್ಣಿಗೆ ತೀವ್ರವಾಗಿ ಪೆಟ್ಟಾಗಿರುವ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಮಾಗಡಿ ರಸ್ತೆಯ ಅನುಭವ ನಗರದಲ್ಲಿರುವ ಬ್ಲೂವೆಲ್ ಶಾಲೆಯಲ್ಲಿ ಘಟನೆ ನಡೆಸಿದ್ದು, ವಿದ್ಯಾರ್ಥಿ ತನ್ಮಯ್ ಮೇಲೆ ಶಿಕ್ಷಕ ಮಾದೇಶ್ ಹಲ್ಲೆ ನಡೆಸಿದ್ದಾನೆ. ಮಗನ ಮೇಲೆ ಶಿಕ್ಷಕ ನಡೆಸಿರುವ ಹಲ್ಲೆ ಖಂಡಿಸಿ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಈ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ತಮ್ಮ ಮಗ ತನ್ಮಯ್ ತರಗತಿಗೆ ಬಂದಾಗ ಗಣಿತ ನೋಟ್ ಬುಕ್ ತಂದಿಲ್ಲ ಎಂದು ಶಿಕ್ಷಕ ಮಾದೇಶ್ ಮಗನ ಕೆನ್ನೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ನಮ್ಮ ಮಗನ ಕಿವಿ, ಕಣ್ಣಿಗೆ ತೀವ್ರ ಪೆಟ್ಟಾಗಿದ್ದು, ರಕ್ತ ಹೆಪ್ಪುಗಟ್ಟಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದ ವಾಣಿ ವಿಲಾಸ ಮಕ್ಕಳ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಮಗನ ಮೇಲಿನ ಹಲ್ಲೆ ಕುರಿತು ಶಾಲೆಯ ಪ್ರಾಂಶುಪಾಲರನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡುತ್ತಾರೆ.
ಬ್ಯಾಂಕ್ ಉದ್ಯೋಗಿಗೆ 10 ಲಕ್ಷ ಉಂಡೆನಾಮ: ವಿದ್ಯಾವಂತರೆ ಹೀಗಾದರೇ, ಅವಿದ್ಯಾವಂತರ ಗತಿ ಏನು..?
‘ನಮಗೆ ಪೊಲೀಸ್ ಬೆಂಬಲವಿದೆ ಏನಾದರೂ ಮಾಡಿಕೊಳ್ಳಿ’ ಎಂದು ಹೇಳುತ್ತಾರೆ. ಹಲ್ಲೆ ಮಾಡಿದ ಶಿಕ್ಷಕರ ಬಗ್ಗೆ ವಿಚಾರಿಸಿದರೆ ‘ಅವರಿಗೆ ಕೋವಿಡ್ ಬಂದಿದೆ ಶಾಲೆಗೆ ಬಂದಿಲ್ಲ’ ಎಂದು ಹೇಳುತ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಸಚಿವರು ಕೂಡಲೇ ಮಧ್ಯಪ್ರವೇಶಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕು. ಮಕ್ಕಳ ಮೇಲೆ ಹಲ್ಲೆ ಮಾಡುವ ಇಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಇಂತಹ ಶಿಕ್ಷಕರನ್ನು ರಕ್ಷಿಸುತ್ತಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ನರಸಿಂಹ ಪ್ರತಿಭಟನೆ ವೇಳೆ ಆಗ್ರಹಿಸಿದ್ದಾರೆ.