Raichur Crime News: ರಾಯಚೂರಿನಲ್ಲಿ ಪತ್ನಿಯನ್ನು ಕೊ*ಲೆಗೈದ ಪತಿಯ ಬಂಧನ. ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಕುಡುಗೋಲಿನಿಂದ ಕೊ*ಲೆ. ಮೂರು ಮಕ್ಕಳ ತಾಯಿ ಬರ್ಬರವಾಗಿ ಕೊ*ಲೆಯಾದ ಘಟನೆ.

ರಾಯಚೂರು: ಮಂಚಕ್ಕೆ ಬರಲು ಹಿಂದೇಟು ಹಾಕಿದ್ದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 31 ವರ್ಷದ ಗಂಗಮ್ಮ ಗಂಡನಿಂದ ಕೊ*ಲೆಯಾದ ಮಹಿಳೆ. ಪತ್ನಿಯನ್ನು ಕೊ*ಲೆಗೈದಿರುವ ಗಂಡ ಯಲ್ಲಪ್ಪನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಗಂಗಮ್ಮ ಸಾವಿನಿಂದ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ಪ್ರತಿದಿನವೂ ಸಂಸಾರದಲ್ಲಿ ಗಲಾಟೆ

2012ರಲ್ಲಿ ಯಲ್ಲಪ್ಪ ಮತ್ತು ಗಂಗಮ್ಮ ಮದುವೆ ನಡೆದಿತ್ತು. ದಂಪತಿಗೆ ಮೂರು ಮಕ್ಕಳಿದ್ದು, ಆದ್ರೆ ಸಂಸಾರದಲ್ಲಿ ಪ್ರತಿದಿನವೂ ಸಣ್ಣ-ಪುಟ್ಟ ವಿಚಾರಗಳಿಗೆ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿಯೂ ಗಂಗಮ್ಮ ಮತ್ತು ಯಲ್ಲಪ್ಪನ ನಡುವೆ ಜಗಳ ನಡೆದಿದೆ. ರಾತ್ರಿ ಪತ್ನಿ ಗಂಗಮ್ಮಳನ್ನು ಮಂಚಕ್ಕೆ ಬರುವಂತೆ ಯಲ್ಲಪ್ಪ ಕರೆದಿದ್ದಾನೆ. ಆದ್ರೆ ಗಂಗಮ್ಮ ಹೋಗಲು ಹಿಂದೇಟು ಹಾಕಿದ್ದಾರೆ.

ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಯಲ್ಲಪ್ಪ ಕೋಪಗೊಂಡಿದ್ದಾನೆ. ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಪತ್ನಿಯ ಕತ್ತು ಸೀಳಿ ಕೊ*ಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಆರೋಪಿ ಯಲ್ಲಪ್ಪನನ್ನು ಬಂಧಿಸಿದ್ದಾರೆ. ಮದುವೆ ಬಳಿಕ ಗಂಗಮ್ಮ ಗಂಡನೊಂದಿಗೆ ತವರು ಮನೆಯಲ್ಲಿಯೇ ವಾಸವಾಗಿದ್ದರು. ತಾಯಿಯನ್ನು ಕಳೆದುಕೊಂಡು ಮೂರು ಮಕ್ಕಳು ತಬ್ಬಲಿಗಳಾಗಿವೆ. ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೂರಂತಸ್ತಿನ ಕಟ್ಟಡದಿಂದ ಹಾರಬೇಕೆನ್ನುವಾಗ ದೇವತೆಯಂತೆ ಬಂದು ವಿದ್ಯಾರ್ಥಿನಿ ಜೀವ ಉಳಿಸಿದ ಶಿಕ್ಷಕಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕೊ*ಲೆ

ಕಲಬುರಗಿ ತಾಲೂಕಿನ ಸೀತನೂರು ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವರಾಯ ಮಾಲೀಪಾಟೀಲ್ (68) ಕೊ*ಲೆಯಾದ ದುರ್ದೈವಿ. ಹೊಲದಿಂದ ಮನೆಗೆ ಬರುತ್ತಿದ್ದಾಗ ಶಿವರಾಯ ಅವರನ್ನು ಹ*ತ್ಯೆ ಮಾಡಲಾಗಿದೆ. 2008 ರಲ್ಲಿ ನಾಗೇಂದ್ರ ಎಂಬವರ ಕೊ*ಲೆ ನಡೆದಿತ್ತು. ಈ ಪ್ರಕರಣದಲ್ಲಿ ಶಿವರಾಯ ಮಾಲೀಪಾಟೀಲ್ ಪ್ರಮುಖ ಆರೋಪಿಯಾಗಿದ್ದರು. ಈ ಕೊಲೆ ಪ್ರಕರಣದಲ್ಲಿ ಶಿವರಾಯ ಖುಲಾಸೆಗೊಂಡಿದ್ದರು.

ಈ ಪ್ರಕರಣ ದ್ವೇಷವೇ ಇಂದಿನ ಕೊ*ಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕೊ*ಲೆ ಬಳಿಕ ನಾಗೇಂದ್ರನ ಪುತ್ರ ಲಕ್ಷ್ಮೀಕಾಂತ್ ಪರಾರಿಯಾಗಿದ್ದಾನೆ. ಫರಹತಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬಸ್ಥರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರುವ ಲಕ್ಷ್ಮೀಕಾಂತ್ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: 15 ವರ್ಷದ ಬಾಲೆಯೊಂದಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷನ ವಿವಾಹ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಕಾಡಾನೆ ಹಾವಳಿ ನಿಯಂತ್ರಣಕ್ಕೆ ನಿರ್ಮಿಸಿದ ಟ್ರಂಚ್‌ಗೆ ಬಿದ್ದು ಯುವಕ ಸಾವು

ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಆಡಿನಕೊಟ್ಟಿಗೆ ನಿವಾಸಿ ನಾಗರಾಜ್(32) ಮೃತರು. ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಬಳಿಕ ಗ್ರಾಮದ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಗ್ರಾಮಸ್ಥರು ಸಭೆ ನಡೆಸಿದ್ದರು. ಗಣೇಶೋತ್ಸವದ ಹಣಕಾಸು ವಿಚಾರವಾಗಿ ಚರ್ಚಿಸಿ ಮನೆಗೆ ತೆರಳಿದ್ದರು. ಶನಿವಾರ ಬೆಳಗ್ಗೆವರೆಗೆ ನಾಗರಾಜ್ ಮನೆಗೆ ತೆರಳಿರಲಿಲ್ಲ. ಹಾಗಾಗಿ ಕುಟುಂಬದವರು, ಗ್ರಾಮಸ್ಥರು ಹುಡುಕಾಟ ನಡೆಸಿದ್ದರು. ಸಂಜೆ ಹೊತ್ತಿಗೆ ದೇವಸ್ಥಾನದ ಪಕ್ಕದಲ್ಲಿ ಆನೆ ನಿಯಂತ್ರಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ನಾಗರಾಜ್ ಮೃತದೇಹ ಪತ್ತೆಯಾಗಿದೆ.

ಆಡಿನಕೊಟ್ಟಿಗೆ ವ್ಯಾಪ್ತಿಯಲ್ಲಿ ಆನೆ ನಿಯಂತ್ರಣ ಟ್ರಂಚ್ ತೆಗೆಯುವಾಗ ಗ್ರಾಮಸ್ಥರು ವಿರೋಧಿಸಿದ್ದರು. ಮನೆಗಳ ಸಮೀಪ ಟ್ರಂಚ್ ತೆಗೆಯದಂತೆ ಆಗ್ರಹಿಸಿದ್ದರು. ಈಗ ಟ್ರಾಂಚ್ ಗೆ ಬಿದ್ದು ನಾಗರಾಜ್ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಗಾಮಸರು ಆಗಹಿಸಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.