ಜಂಗಮ್ಮ ತನ್ನ ಮಗಳು ಭಾರ್ಗವಿಯನ್ನು ಇಬ್ರಾಹಿಂಪಟ್ಟಣಂ ಜಿಲ್ಲೆಯ ತಮ್ಮ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ಹೈದರಾಬಾದ್‌ನಲ್ಲಿ ಮಹಿಳೆಯೊಬ್ಬರು ಬುಧವಾರ ತನ್ನ 19 ವರ್ಷದ ಮಗಳು ತನ್ನ ಗೆಳೆಯನೊಂದಿಗೆ ತಮ್ಮ ಮನೆಯಲ್ಲಿರುವುದನ್ನು ಕಂಡು, ಪುತ್ರಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮಗಳು ಭಾರ್ಗವಿ ತನ್ನ ಪ್ರಿಯಕರನೊಂದಿಗೆ ಇದ್ದುದನ್ನು ಜಂಗಮ್ಮ ನೋಡಿದ್ದಾರೆ. ಇದರಿಂದ ಕೋಪಗೊಂಡ ಆಕೆ ಇಬ್ರಾಹಿಂಪಟ್ಟಣದ ತಮ್ಮ ಮನೆಯಲ್ಲಿ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ಜಂಗಮ್ಮ ಕೆಲಸ ಮುಗಿಸಿ ಮನೆಗೆ ಊಟಕ್ಕೆ ಬಂದಿದ್ದು, ಭಾರ್ಗವಿ ತನ್ನ ಪ್ರಿಯಕರನ ಜೊತೆಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ನೋಡಿದ ಆಕೆ ಮಗಳ ಪ್ರಿಯಕರನನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ಬಳಿಕ ಮಗಳ ಮೇಲೆ ಹಲ್ಲೆ ನಡೆಸಿದ್ದು, ಸೀರೆಯಿಂದ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ನಾವು ಪಾಕಿಸ್ತಾನಿ ಹಿಂದೂಗಳು- ನಾವಿದ್ದೀವಿ ಮತ್ತು ಸಂತೋಷವಾಗಿದ್ದೀವಿ'; ಏನಿದು ಹೊಸ ಇನ್ಸ್ಟಾಗ್ರಾಂ ಟ್ರೆಂಡ್?

ಇಬ್ರಾಹಿಂಪಟ್ಟಣಂ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಮಾತನಾಡಿ, ಸಂತ್ರಸ್ತೆಯ ಅಪ್ರಾಪ್ತ ಸಹೋದರ ತಾನು ಕೊಲೆಯನ್ನು ನೋಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಮತ್ತು ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಾನೆ. ತನ್ನ ತಾಯಿ ತನ್ನ ಸಹೋದರಿಯ ಮೇಲೆ ಹಲ್ಲೆ ಮಾಡುವುದನ್ನು ಕಿಟಕಿಯಿಂದ ನೋಡಿದ್ದಾಗಿ ಆತ ಪೋಲೀಸರಿಗೆ ಹೇಳಿದ್ದಾನೆ.