ಅಕ್ರಮ ಗೋಮಾಂಸ ಸಾಗಾಟ; ತಡೆಯಲು ಯತ್ನಿಸಿದ ಬಜರಂಗದಳ ಕಾರ್ಯಕರ್ತರ ಮೇಲೆ ಅನ್ಯಕೋಮಿನ ವ್ಯಕ್ತಿಗಳಿಂದ ಹಲ್ಲೆ
ಬಜರಂಗದಳದ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರ ಹಲ್ಲೆ ಆರೋಪ ಕುಣಿಗಲ್ ಪೊಲೀಸ್ ಠಾಣೆ ಮುಂದೆ ನೂರಾರು ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ ಘಟನೆ ನಡೆದಿದೆ. ಶಾನೇಗೌಡ ಮತ್ತು ಗಿರೀಶ್ ಹಲ್ಲೆಗೊಳಗಾದ ಕಾರ್ಯಕರ್ತರು. ಗಾಯಾಳುಗಳಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ತುಮಕೂರು (ಡಿ.31): ಬಜರಂಗದಳದ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರ ಹಲ್ಲೆ ಆರೋಪ ಕುಣಿಗಲ್ ಪೊಲೀಸ್ ಠಾಣೆ ಮುಂದೆ ನೂರಾರು ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ ಘಟನೆ ನಡೆದಿದೆ. ಶಾನೇಗೌಡ ಮತ್ತು ಗಿರೀಶ್ ಹಲ್ಲೆಗೊಳಗಾದ ಕಾರ್ಯಕರ್ತರು. ಗಾಯಾಳುಗಳಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಘಟನೆ ಹಿನ್ನೆಲೆ:
ಕುಣಿಗಲ್ ಪಟ್ಟಣದ ಮದ್ದೂರು ರಸ್ತೆಯಲ್ಲಿ ಘಟನೆ. ಅಕ್ರಮ ಗೋ ಮಾಂಸ ಮಾರಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಬಜರಂಗದಳ ಕಾರ್ಯಕರ್ತರು. ಈ ವೇಳೆ ಪೊಲೀಸರೊಂದಿಗೆ ದಾಳಿ ನಡೆಸಲು ಬಜರಂಗದಳ ಕಾರ್ಯಕರ್ತರು ಸಜ್ಜಾಗಿ ನಿಂತಿದ್ದರು. ಆದರೆ ಕಾರ್ಯಾಚರಣೆಗೆ ಪೊಲೀಸರು ಬರಲು ವಿಳಂಬವಾಗಿದೆ. ಹೀಗಾಗಿ ಪೊಲೀಸರು ಬರುವವರೆಗೆ ರಸ್ತೆ ಬದಿಯಲ್ಲಿ ಟೀ ಕುಡಿಯುತ್ತಿದ್ದ ನಿಂತಿದ್ದ ಬಜರಂಗದಳ ಕಾರ್ಯಕರ್ತರು.
ಮುಂಜಾನೆ ಕೊರೆಯುವ ಚಳಿಗೆ ಹೆಚ್ಚುತ್ತಿರುವ ಅಪಘಾತ; ರಾತ್ರಿ ಪಾಳಿ ಚಾಲಕರಿಗೆ ಥರ್ಮೋ ಫ್ಲಾಸ್ಕ್ ನೀಡಲು KSRTC ನಿರ್ಧಾರ
ಈ ವೇಳೆ ಅನ್ಯಕೋಮಿನ ಸುಮಾರು 50 ಜನರಿಂದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕುಣಿಗಲ್ ನಗರದ ಮದ್ದೂರು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಕುಣಿಗಲ್ ಪೊಲೀಸ್ ಠಾಣೆಯ ಮುಂದೆ ನೂರಕ್ಕೂ ಹೆಚ್ಚು ಭಜರಂಗದಳದ ಕಾರ್ಯಕರ್ತರು ಜಮಾಯಿಸಿದರು. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪೊಲೀಸರು. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!