ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಬೆಳಗಾವಿಯಲ್ಲಿ 6 ಮಂದಿ ಸೆರೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ನಡೆಸಲಾಗಿದ್ದ ಕೆಪಿಟಿಸಿಎಲ್‌ನ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಬ್ಲೂಟೂತ್, ಡಿವೈಸ್, ಸ್ಮಾರ್ಟ್‌ವಾಚ್‌ಗಳ ಬಳಸಿ ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಮತ್ತೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಬೆಳಗಾವಿ (ಅ.22): ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ನಡೆಸಲಾಗಿದ್ದ ಕೆಪಿಟಿಸಿಎಲ್‌ನ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಬ್ಲೂಟೂತ್, ಡಿವೈಸ್, ಸ್ಮಾರ್ಟ್‌ವಾಚ್‌ಗಳ ಬಳಸಿ ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಮತ್ತೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಈರಣ್ಣ ಬಂಕಾಪೂರ (26), ಶಿವಾನಂದ ಕುಮೋಜಿ (22) ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದ ಆದಿಲ್ ಶಾ ತಾಸೇವಾಲೆ (23), ಮೂಡಲಗಿ ತಾಲೂಕಿನ ಖಾನಟ್ಟಿಗ್ರಾಮದ ಮಹಾಂತೇಶ ಹೊಸಾಪೂರ (22), ನಾಗನೂರ ಗ್ರಾಮದ ಮಹಾಲಿಂಗ ಕುರಿ (30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ (23) ಬಂಧಿತ ಆರೋಪಿಗಳು.
Belagavi: ಕೆಪಿಟಿಸಿಎಲ್ ಅಕ್ರಮ: ಮತ್ತೆ ಮೂವರ ಬಂಧನ
ಆ.7ರಂದು ಗೋಕಾಕ ನಗರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಮೈಕ್ರೋ ಚಿಪ್ ಡಿವೈಸ್‌ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ಬಂಧಿತರಿಂದ ಇಲೆಕ್ಟ್ರಾನಿಕ್ ಡಿವೈಸ್, ಮೈಕ್ರೋ ಚಿಪ್ ಮತ್ತು ಮೊಬೈಲ್ ಸೇರಿ ಇತರೆ ದಾಖಲೆ ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ, ಮತ್ತಿಬ್ಬರ ಸೆರೆ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೇರಿದೆ. ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಮತ್ತು ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತ ಆರೋಪಿಗಳು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.
ಯಲ್ಲಪ್ಪ ಮಹದೇವ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್ ವಿದ್ಯಾರ್ಥಿಗಳಿಗೆ ಕೊಟ್ಟಿದ್ದ ಮತ್ತು ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದ್ದ. ಈತನಿಂದ ಒಂದು ಮೊಬೈಲ್ ಮತ್ತು ಒಂದು ಕಾರ್ ಜಪ್ತಿ ಮಾಡಲಾಗಿದೆ. ನಾಗಪ್ಪ ಶಿವಪ್ಪ ದೊಡಮನಿ ಎಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದ. ಈತನಿಂದ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.
20 ಆರೋಪಿಗಳಿಗೆ ಜಾಮೀನು: ಕೆಪಿಟಿಸಿಎಲ್ ಸಹಾಯಕ ಎಂಜಿಯರಿಂಗ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ 20 ಆರೋಪಿಗಳಿಗೆ ಗೋಕಾಕ ನಗರದ ಜೆಎಂಎಫ್‌ಸಿ ಎರಡನೇ ನ್ಯಾಯಾಲಯದ ನ್ಯಾ.ಜಿ.ರಾಜೀವ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿತರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. 20 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗೋಕಾಕದ ಜಿಎಸ್‌ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 7 ರಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಂದಿತ್ತು.
ಕೆಪಿಟಿಸಿಎಲ್ ಅಕ್ರಮ: ಬಂಧಿತರ ಸಂಖ್ಯೆ 13ಕ್ಕೇ ಏರಿಕೆ
ಆಗಸ್ಟ್ 10ರಂದು ಪ್ರಕರಣ ಸಂಬಂಧ ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಿದ್ದರು. ಸ್ಮಾರ್ಚ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಹೊರಗೆ ರವಾನಿಸಿದ್ದ. ಸಿದ್ದಪ್ಪ ಕ್ರಮ ಎಸಗುವ ದೃಶ್ಯ ಪರೀಕ್ಷಾ ಕೇಂದ್ರದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಕರಣವನ್ನು ಬೇಧಿಸಿದ್ದರು. ಆ.23 ರಂದು 9 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಬಳಿಕ ಹಂತ ಹಂತವಾಗಿ 20 ಆರೋಪಿಗಳನ್ನು ಬಂಧಿಸಿದ್ದರು.