ಅಕ್ರಮ ಕಾಡುಕೋಣ ಮಾಂಸ ಸಾಗಾಟದ ಕಾರು ಮರಕ್ಕೆ ಡಿಕ್ಕಿ: ಆರೋಪಿಗಳು ಪರಾರಿ!

ಸಮೀಪದ ಕಕ್ಕಬ್ಬೆ ಕುಂಜೀಲ ಗ್ರಾಮದಿಂದ ಶುಕ್ರವಾರ ರಾತ್ರಿ ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಆರೋಪಿಗಳು ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Illegal wild boar meat trade accused escaped in napoklu at kodagu rav

ನಾಪೋಕ್ಲು (ಜೂ.4) : ಸಮೀಪದ ಕಕ್ಕಬ್ಬೆ ಕುಂಜೀಲ ಗ್ರಾಮದಿಂದ ಶುಕ್ರವಾರ ರಾತ್ರಿ ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಆರೋಪಿಗಳು ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕಾಡುಕೋಣ ಮಾಂಸ(boar meat)ವನ್ನು ಕೇರಳ ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ವೇಗನಾರ್‌ ಕಾರಿನಲ್ಲಿ ಸಾಗಾಟ ಮಾಡಲು ಆರೋಪಿಗಳು ಯತ್ನಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಆರೋಪಿಗಳನ್ನು ಬೆನ್ನಟ್ಟಿಕೊಂಡು ಬಂದ ಇಲ್ಲಿನ ಪೊಲೀಸರು, ಮೇಕೇರಿಯ ಸುಭಾಸ್‌ ನಗರದ ಬಳಿ ತಲುಪಿದಾಗ ಚಾಲಕನ ಅತೀ ವೇಗದಿಂದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾಗಿರುವ ಕಾರನ್ನು ಪತ್ತೆ ಹಚ್ಚಿದ್ದಾರೆ. ನಾಪೋಕ್ಲು ಠಾಣಾ ಪೊಲೀಸರು ಹಾಗೂ ಮಡಿಕೇರಿ ಗ್ರಾಮಾಂತರ ಪೊಲೀಸರು ವಾಹನ ಸಮೇತ ಚೀಲಗಳಲ್ಲಿ ತುಂಬಿದ್ದ 50 ಕೆಜಿ ಕಾಡುಕೋಣ ಮಾಂಸವನ್ನು ವಶ ಪಡಿಸಿಕೊಂಡಿದ್ದು ಕಾರನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

ಕುರಿ ಮಾಂಸದ ಅಂಗಡೀಲಿ ಗೋಮಾಂಸ ಕೇಸ್: ಖರೀದಿಸಿದವರಿಗೆ ಜಾಮೀನು ಸಿಕ್ಕ ಹಿನ್ನೆಲೆ ಮಾರಿದವರಿಗೂ ಜಾಮೀನು

ಜಿಲ್ಲಾ ಪೊಲೀಸ್‌ ಅಧೀಕ್ಷಕ ರಾಮರಾಜನ್‌, ಹೆಚ್ಚುವರಿ ಪೊಲೀಸ್‌ ಉಪನಿರೀಕ್ಷಕರಾದ ಸುಂದರರಾಜ್‌ ಅವರ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್‌, ವೃತ್ತ ನಿರೀಕ್ಷಕ ಶೇಖರ್‌ ಅವರ ಮಾರ್ಗದರ್ಶನದಲ್ಲಿ ನಾಪೋಕ್ಲು ಠಾಣಾನಾಧಿಕಾರಿ ಮಂಜುನಾಥ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದು ಪ್ರಕರಣವನ್ನು ಅರಣ್ಯ ವನ್ಯಜೀವಿ ಸಂರಕ್ಷಣಾ ಇಲಾಖೆಗೆ ಹಸ್ತಾಂತರಿಸಲಾಯಿತು.  ಪೊಲೀಸರು ರವಾನಿಸಿದ್ದಾರೆ.

ಫೋನ್‌ ಇನ್‌ ದೂರಿಗೆ ತಕ್ಷಣ ಸ್ಪಂದನೆ

ಮಂಗಳೂರು: ಮಂಗಳೂರು ಪೊಲೀಸ್‌ ಆಯುಕ್ತರು ನಡೆಸಿದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಬಂದ ದೂರುಗಳನ್ನು ಆಧರಿಸಿ ಕೆಲವೇ ಗಂಟೆಗಳಲ್ಲಿ ಪೊಲೀಸರು ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ಮಾಡಿದ್ದಾರೆ.

ಮುಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯ ಎರಡು ಕಡೆ ಮಟ್ಕಾ ನಡೆಯುತ್ತಿದ್ದ ದೂರಿನ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಾದ ಮೋಹನ್‌ ಪೂಜಾರಿ ಮತ್ತು ಆನಂದ್‌ ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ 5,892 ರು. ವಶಪಡಿಸಿಕೊಂಡಿದ್ದಾರೆ.

ಮೇ 5 ರಂದು ಮಾಂಸ ಮಾರಾಟ ನಿಷೇಧ: ಮೇ 10ಕ್ಕೆ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ!

ಮತ್ತೊಂದು ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸರು ಬಾರ್‌ವೊಂದರ ಪರಿಸರದಲ್ಲಿ ಮಟ್ಕಾ ಜುಗಾರಿ ಕುರಿತಾಗಿ ತಪಾಸಣೆ ನಡೆಸಿದರು. ಆದರೆ ಈ ವೇಳೆ ಮಟ್ಕಾ ಆಡುತ್ತಿರುವುದು ಕಂಡುಬಂದಿಲ್ಲ. ಮೂಡುಬಿದಿರೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನಂತೆ ತಪಾಸಣೆ ನಡೆಸಿದಾಗ ಮದ್ಯ ಮಾರಾಟ ಕಂಡುಬಂದಿಲ್ಲ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios