Asianet Suvarna News Asianet Suvarna News

ಮುಸ್ಲಿಂ ಮಹಿಳೆ ಜತೆ ಅನೈತಿಕ ಸಂಬಂಧ ಆರೋಪ; ಸಾಮಾಜಿಕ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!

ಈವರೆಗೆ ಕರಾವಳಿ, ಮಲೆನಾಡಿಗೆ ಸೀಮಿತವಾಗಿದ್ದ ನೈತಿಕ ಪೊಲೀಸ್‌ಗಿರಿ ಇದೀಗ ಕೋಟೆನಾಡು ಚಿತ್ರದುರ್ಗಕ್ಕೂ ಕಾಲಿಟ್ಟಿದೆ. ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

illicit relationship with a Muslim woman A person assaulted by family members at chitradurga rav
Author
First Published Apr 2, 2024, 6:54 PM IST

ಚಿತ್ರದುರ್ಗ (ಏ.2): ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗಿ ಕರಾವಳಿ ಭಾಗದಲ್ಲಿ ಮಾಮೂಲಿ ಎಂಬ ಮಾತಿತ್ತು. ಆದರೆ ಇತ್ತೀಚೆಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕರ್ನಾಟಕ, ಚಿತ್ರದುರ್ಗ ಭಾಗದಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆಯಾ ಎಂಬ ಅನುಮಾನ ಮೂಡಿಸುವಂತಹ ಘಟನೆಗಳು ನಡೆಯುತ್ತಿವೆ. ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಅನ್ಯಕೋಮಿನವರು ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ.

ಸಾಮಾಜಿಕ ಕಾರ್ಯಕರ್ತ ಬಿಎಚ್‌ ಗೌಡ, ಹಲ್ಲೆಗೊಳಗಾಗಿರುವ ವ್ಯಕ್ತಿ. ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದನೆಂದು ಆರೋಪಿಸಲಾಗಿದೆ. ಇದು ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್‌ ಗೌಡರ ಕಾರು ಅಡ್ಡಗಟ್ಟಿ ಹೊರಗೆಳೆದಿದ್ದಾರೆ. ಇಬ್ಬರು ವ್ಯಕ್ತಿಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಿಗ್ಗಾಮುಗ್ಗ ಥಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೇಸ್

ನೈತಿಕ ಪೊಲೀಸ್‌ಗಿರಿ ಆರೆಸ್ಸೆಸ್‌, ಬಜರಂಗದಳ ಕುತಂತ್ರ: ಸಚಿವ ಗುಂಡೂರಾವ್‌

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೈತಿಕ ಪೊಲೀಸ್‌ಗಿರಿ ನಿರ್ನಾಮ ಮಾಡುತ್ತೇವೆ ಎಂದು ಗುಡುಗಿದ್ದ ಸಿಎಂ ಸಿದ್ದರಾಮಯ್ಯ. ಆದರೆ ಅಧಿಕಾರಕ್ಕೆ ಬಂದ ಮೇಲೆ ಪ್ರಕರಣಗಳು ಹೆಚ್ಚಳವಾಗುತ್ತಿವೆ ವಿನಃ ಕಡಿಮೆಯಾಗುತ್ತಿಲ್ಲ.  ನೈತಿಕ ಪೊಲೀಸಗಿರಿ ನಿಯಂತ್ರಣ ಮಾಡಲು ವಿಫಲವಾಯ್ತಾ ಸರ್ಕಾರ? ಈವರೆಗೆ ಕರಾವಳಿ ಮಲೆನಾಡಿಗೆ ಸೀಮಿತವಾಗಿದ್ದ ನೈತಿಕ ಪೊಲೀಸ್‌ಗಿರಿ ಇದೀಗ ಕೋಟೆನಾಡು ಚಿತ್ರದುರ್ಗಕ್ಕೂ ವ್ಯಾಪಿಸಿದೆ.

Follow Us:
Download App:
  • android
  • ios