Chikkamagaluru: ಸಿಇಟಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಯತ್ನಿಸಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ!

ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ನಡೆದು ಈಗಾಗಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಆರೋಪಿಗಳು ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಸಿಇಟಿ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ.

in cet chemistry exam student attempt to write an answer via mobile in chikkamagaluru gvd

ಚಿಕ್ಕಮಗಳೂರು (ಜೂ.19): ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ನಡೆದು ಈಗಾಗಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಆರೋಪಿಗಳು ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ಸಿಇಟಿ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೈಸೂರು ಮೂಲದ ವಿದ್ಯಾರ್ಥಿಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಬಳಕೆ ಮಾಡಿ ಈ ಮೂಲಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕೆಂಬ ಉದ್ದೇಶವನ್ನು ವಿದ್ಯಾರ್ಥಿ ಹೊಂದಿದ್ದ.

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ಪರೀಕ್ಷೆ: ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ನಡೆದಿದೆ ಎಂಬ ವಿಷಯ ಸದ್ದು ಮಾಡುತ್ತಿರುವಾಗಲೆ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಒಯ್ದಿದ್ದು, ವಿದ್ಯಾರ್ಥಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜಿನಲ್ಲಿ ನಡೆದಿದೆ. 

ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ಬೇಲ್‌ ರಹಿತ ವಾರಂಟ್‌

ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನಡೆದಿದ್ದ ಪರೀಕ್ಷೆಯಲ್ಲಿ ಮೊಬೈಲ್ ಬಳಸಿಕೊಂಡು ಅಕ್ರಮ ನಡೆಸಿದ್ದಾರೆಂಬ ವಿಷಯ ಭಾರೀ ಸದ್ದು ಮಾಡುತ್ತಿರುವಾಗಲೇ ಸಿಇಟಿ ಪರೀಕ್ಷಾ ಕೇಂದ್ರದ ಒಳಗೆ ವಿದ್ಯಾರ್ಥಿಯೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿದ್ದು ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಶುಕ್ರವಾರ ಮಧ್ಯಾಹ್ನ ನಗರದ ಜೂನಿಯರ್ ಕಾಲೇಜಿನಲ್ಲಿ ನಡೆದ ರಸಾಯನ ಶಾಸ್ರ್ತವಿಜ್ಞಾನ ವಿಷಯದ ಸಿಇಟಿ ಪರೀಕ್ಷೆಗೆ ಮೈಸೂರು ಮೂಲದ ವಿದ್ಯಾರ್ಥಿಯೊಬ್ಬ ಪ್ಯಾಂಟ್ ಜೇಬಲ್ಲಿ ಮೊಬೈಲ್ ಇಟ್ಟುಕೊಂಡು ಹೋಗಿದ್ದು ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯದಂತೆ ತಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಶೃಂಗೇರಿ ಶ್ರೀಗಳಿಂದ ಪ್ರತಿಷ್ಠಾಪನೆಗೆ ಶಂಕರಾಚಾರ್ಯ ದೇವಾಲಯ ಸಜ್ಜು

ವಿದ್ಯಾರ್ಥಿ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲು: ವಿದ್ಯಾರ್ಥಿಯನ್ನು ಪೊಲೀಸರಿಗೆ ಒಪ್ಪಿಸಿ ನಗರ ಠಾಣೆಯಲ್ಲಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಯನ್ನು ವಿಚಾರಣೆಗೊಳಪಡಿಸಿದಾಗ ಗಣಿತ ಪರೀಕ್ಷೆಗೂ ಸಹಾ ಮೊಬೈಲ್ ತೆಗೆದುಕೊಂಡು ಹೋಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಗಣಿತ ಪರೀಕ್ಷೆಯಲ್ಲೂ ಮೊಬೈಲ್ ಬಳಸಿ ಪರೀಕ್ಷೆ ಬರೆದಿದ್ದು, ರಸಾಯನ ಶಾಸ್ತವಿಷಯದ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದಿದ್ದಾನೆ. ಮೊಬೈಲ್ ಮೂಲಕ ಗೂಗಲ್‌ನಲ್ಲಿ ಉತ್ತರ ಹುಡುಕಿ ಪರೀಕ್ಷೆ ಬರೆದು ಪ್ರಥಮ ಸ್ಥಾನ ಗಿಟ್ಟಿಸಿಕೊಳ್ಳುವ ಆಕಾಂಕ್ಷೆ ಹೊಂದಿದ್ದ ಎನ್ನಲಾಗಿದ್ದು, ಸದ್ಯ ವಿದ್ಯಾರ್ಥಿ ಪೊಲೀಸರ ವಶದಲ್ಲಿದ್ದಾನೆ. ಎರಡು ಹಂತಗಳಲ್ಲಿ ತಪಾಸಣೆ ನಡೆಸಿ ಒಳಗೆ ಬಿಟ್ಟಿದ್ದರೂ ಕೂಡಾ ವಿದ್ಯಾರ್ಥಿ ಮೊಬೈಲ್ ಪ್ಯಾಂಟ್ ಜೇಬಲ್ಲಿ ಒಯ್ದಿರುವುದು ಯಕ್ಷ ಪ್ರಶ್ನೆಯಾಗೇ ಉಳಿದಿದೆ.

Latest Videos
Follow Us:
Download App:
  • android
  • ios