ಪಣಜಿಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಹಸ್ತಮೈಥುನ ಮಾಡುತ್ತಿದ್ದ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.
ಪಣಜಿ (ಫೆ.25): ಗೋವಾದ ಪಣಜಿಯ ಬ್ಯಾಂಕ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗೋವಾ ಪೊಲೀಸರು ಸೋಮವಾರ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಟಿಯೊಬ್ಬರು ಪೊಲೀಸ್ ದೂರು ದಾಖಲಿಸಿದ್ದು, ರಾತ್ರಿ 10.15 ರ ಸುಮಾರಿಗೆ ತಾನು ಮತ್ತು ತನ್ನ ಸ್ನೇಹಿತ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. "ಆರೋಪಿ ಕೂಡ ದ್ವಿಚಕ್ರ ವಾಹನದಲ್ಲಿದ್ದ. ಆರೋಪಿ ಹಸ್ತಮೈಥುನ ಮಾಡುತ್ತಿದ್ದ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಂದು ದೂರುದಾರರು ಹೇಳಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ನಟಿ ಸೋಬಿತಾ ಕುಡ್ತಾರ್ಕರ್ ಇನ್ಸ್‌ಟಾಗ್ರಾಮ್‌ನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ. ತಾನು ಮತ್ತು ತನ್ನ ಸ್ನೇಹಿತ ಇದರಿಂದ "ಅಸಹ್ಯಗೊಂಡೆವು" ಮತ್ತು "ಮುಖ ಕಿವುಚುತ್ತಾ ಹೋದೆವು" ಅಲ್ಲಿಂದ ಆದಷ್ಟು ವೇಗವಾಗಿ ಓಡಿಹೋದೆವು ಎಂದು ಹೇಳಿದ್ದಾಳೆ. ಈ ಘಟನೆಯ ಬೆನ್ನಲ್ಲಿಯೇ ಆರೋಪಿಗೆ ಎಚ್ಚರಿಕೆ ನೀಡಬೇಕಿತ್ತೋ ಅಥವಾ ಆತನೊಂದಿಗೆ ಗಲಾಟೆ ಮಾಡಬೇಕಿತ್ತೋ ಅನ್ನೋದರ ಯೋಚನೆ ನನಗೆ ಕಾಡಿತ್ತು ಎಂದು ಬರೆದುಕೊಂಡಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ ನೋಡಿದ ನಂತರ ಸಂತ್ರಸ್ಥೆ ಆಗಿರುವ ನಟಿಯನ್ನು ಸಂಪರ್ಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಮತ್ತು ಸೋಮವಾರ ಮಧ್ಯಾಹ್ನ ಪ್ರಕರಣ ದಾಖಲಿಸಲಾಗಿದೆ. ಬಿಎನ್‌ಎಸ್ ಸೆಕ್ಷನ್ 78 (2) (ಹಿಂಬಾಲಿಸುವುದು), 75 (2) (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯು "ಕ್ರಿಮಿನಲ್ ಉದ್ದೇಶದಿಂದ" ಸ್ಕೂಟರ್‌ನಲ್ಲಿ ಮಹಿಳೆಯರನ್ನು ಹಿಂಬಾಲಿಸಿದನೆಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
'ನಿನ್ನ ಫೋಟೋ ನೋಡಿಕೊಂಡು ಹಸ್ತಮೈಥುನ ಮಾಡಿಕೊಂಡೆ..' ಪವಿತ್ರಾ ಗೌಡಗೆ ಸಂದೇಶ ಕಳಿಸಿದ್ದ ರೇಣುಕಾಸ್ವಾಮಿ!
ಸಿಸಿಟಿವಿ ದೃಶ್ಯಾವಳಿ ಮತ್ತು ಸಂತ್ರಸ್ಥೆಯ ಹೇಳಿಕೆಯ ಆಧಾರದ ಮೇಲೆ ಶಂಕಿತನನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ."ಆರೋಪಿಗೆ ಹಿಂದಿನ ಕ್ರಿಮಿನಲ್ ಇತಿಹಾಸವಿದ್ದು, ಅವನ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣಗಳು ದಾಖಲಾಗಿವೆ. ಅವರು ಪ್ರಸ್ತುತ 2024 ರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳು ದಾಳಿ ನಡೆಸುತ್ತಿವೆ" ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
KSRTC ಬಸ್‌ನಲ್ಲಿ ನಟಿ ಮುಂದೆ ಹಸ್ತಮೈಥುನ ಮಾಡ್ಕೊಂಡ ಯುವಕನಿಗೆ ಜೈಲಿನ ಬಳಿ ಅದ್ಧೂರಿ ಸ್ವಾಗತ!


