ಹಾಲು ಮಾರುವ ವ್ಯಕ್ತಿಯಿಂದ 7 ವರ್ಷದ ಬಾಲಕಿಯ ಮೇಲೆ ರೇಪ್!
ಹಾಲು ಮಾರುವ ವ್ಯಕ್ತಿ 7 ವರ್ಷದ ಬಾಲಕಿಯ ಮೇಲೆ ರೇಪ್ ಮಾಡಿದ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲಿಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನವದೆಹಲಿ (ಮೇ.8): ಆಘಾತಕಾರಿ ಘಟನೆಯೊಂದರಲ್ಲಿ, ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 40 ವರ್ಷದ ಮಾರುವ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 180 ಕಿಮೀ ದೂರದಲ್ಲಿರುವ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ, ಹಾಲು ನೀಡಲು ಆಕೆಯ ನಿವಾಸಕ್ಕೆ ಬಂದಿದ್ದ ಆರೋಪಿ, ತನ್ನ ಫೋನ್‌ನಲ್ಲಿ ಏನೋ ತೋರಿಸುವ ನೆಪದಲ್ಲಿ ಮನೆಯ ಪಕ್ಕದಲ್ಲೇ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ಡು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. 'ಆರೋಪಿಯು ಹಾಲು ಸರಬರಾಜು ಮಾಡಲು ಮನೆಗೆ ಬಂದಾಗ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಹಾಲು ಮಾರುವ ವ್ಯಕ್ತಿ ಮೊಬೈಲ್ ಫೋನ್‌ನಲ್ಲಿ ಏನೋ ತೋರಿಸುವುದಾಗಿ ಭರವಸೆ ನೀಡಿ ಆಕೆಗೆ ಆಮಿಷವೊಡ್ಡಿದ್ದ. ಆರೋಪಿಯು ಆಕೆಯನ್ನು ಪಕ್ಕದ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಿಶವ್ ಗಾರ್ಗ್ ಅವರು ಪಿಟಿಐಗೆ ಹೇಳಿದ್ದಾರೆ.
ವಿಷಯ ತಿಳಿದ ಪೋಷಕರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕ್ಷಿಪ್ರವಾಗಿ ಕ್ರಮ ಕೈಗೊಂಡು ಆರೋಪಿಯನ್ನು ಭಾನುವಾರ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಬಾಲಕಿಯನ್ನು ಪರೀಕ್ಷೆಗಾಗಿ ಮೇದಿನಿನಗರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಇದೇ ರೀತಿಯ ಇನ್ನೊಂದು ಘಟನೆಯಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ಅಪ್ರಾಪ್ತ ವಯಸ್ಸೊನ ಹುಡುಗಿಯ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಪ್ರಾಪ್ತರ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಎಎನ್‌ಐಗೆ ತಿಳಿಸಿದ್ದಾರೆ. "ಮನೆಯಲ್ಲಿ ಪಾಲಕರು ಇಲ್ಲದೇ ಇದ್ದ ಲಾಭವನ್ನು ಪಡೆದ ಆರೋಪಿ, ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ" ಎಂದು ಆಗ್ರಾದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿಕಾಸ್ ಕುಮಾರ್ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
Shocking! ಪಾಕಿಸ್ತಾನದಲ್ಲಿ ಹೆಣ್ಣುಮಕ್ಕಳ ಸಮಾಧಿಗೆ ಕಬ್ಬಿಣದ ಗೇಟ್ ಲಾಕ್! ನೆರೆಯ ದೇಶದಲ್ಲಿ ಇದೆಂತಾ ದುಸ್ಥಿತಿ..
ಡಿಸಿಪಿ ಪ್ರಕಾರ, ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು. ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Watch: ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಶವವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಬಂಗಾಳ ಪೊಲೀಸ್!