Asianet Suvarna News Asianet Suvarna News

Kodagu; ಕೊಡವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದಾತ ಬಂಧನ

ಕೊಡಗು ಜಿಲ್ಲೆಯಲ್ಲಿ ಕಾವೇರಿ ಮತ್ತು ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್  ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

Insult to Kodavas and Goddess Cauvery Accused arrested in coorg gow
Author
Bengaluru, First Published Jul 18, 2022, 8:04 AM IST

 ಕೊಡಗು (ಜು.18): ಕೊಡಗು ಜಿಲ್ಲೆಯಲ್ಲಿ ಕಾವೇರಿ ಮತ್ತು ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್  ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ಪಾರಾಂಗಾಲ ಗ್ರಾಮದ  ಕೆದಮುಳ್ಳೂರು ನಿವಾಸಿ ಕೆ.ಸಿ. ದಿವಿನ್‌ ದೇವಯ್ಯ (29) ಬಂಧಿತ ಯುವಕ. ಕೃತ್ಯಕ್ಕೆ ಬಳಸಿದ ಮೊಬೈಲ್‌ ಫೋನ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ದೀವಿನ್ ದೇವಯ್ಯ ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಆರೋಪಿಯ ಕುತಂತ್ರ ಕೊನೆಗೂ ಪೊಲೀಸ್ ತನಿಖೆಯಲ್ಲಿ  ಬಯಲಾಗಿದ್ದು, ಈಗ ದೀವಿನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಈ ಪ್ರಕರಣ ಸಂಬಂಧ ಹಲವರನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮಾತ್ರವಲ್ಲ ಈ ಬಗ್ಗೆ ಸೋಮವಾರ ಬೃಹತ್ ಪ್ರತಿಭಟನೆಗೆ ಹಲವು ಸಂಘಟನೆಗಳು ಸಜ್ಜಾಗಿದ್ದವು. ಆರೋಪಿ ಬಂಧನ ಹಿನ್ನಲೆ ಸಂಘಟನೆಗಳು‌ ಪ್ರತಿಭಟನೆ ಕೈ ಬಿಟ್ಟಿವೆ. ಕೊಡಗು ಸೇರಿದಂತೆ ಪ್ರಕರಣ ಸಂಬಂದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ವಂಚನೆ ಕೇಸ್‌ನಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟಿ ಆಪ್ತ ಸೇರಿ ಇಬ್ಬರು ಅರೆಸ್ಟ್ 

ರಾಮನಕೊಲ್ಲಿ ಸೇತುವೆಗೆ ಹಾನಿಯಾಗಿಲ್ಲ, ಆತಂಕ ಬೇಡ: ಸ್ಪಷ್ಟನೆ
ಮಡಿಕೇರಿ : ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿಯಲ್ಲಿ ತೀವ್ರ ಮಳೆಯಿಂದಾಗಿ ರಾಮನಕೊಲ್ಲಿ ಸೇತುವೆಗೆ ಹಾನಿಯಾಗಿದೆ ಎಂಬ ಮಾಹಿತಿಯಂತೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ನಾಗೇಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜವರೇಗೌಡ, ತಹಸೀಲ್ದಾರ್‌ ಮಹೇಶ್‌ ಮತ್ತು ಹೋಬಳಿ ಮಟ್ಟದ ನೋಡಲ್‌ ಅಧಿಕಾರಿ ಅವರೊಂದಿಗೆ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ರಾಮನಕೊಲ್ಲಿ ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ಕಾರ್ಯಪಾಲಕ ಅಭಿಯಂತರರಾದ ನಾಗೇಂದ್ರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸೇತುವೆ ಕಾಮಗಾರಿಯು ಇನ್ನೂ ಪ್ರಗತಿಯಲ್ಲಿದ್ದು, ಸೇತುವೆಗೆ ಹಾನಿಯಾಗಿಲ್ಲ , ಮಳೆಯಿಂದ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲವಾದ್ದರಿಂದ, ಈ ಸ್ಥಳದಲ್ಲಿ ಮರಳು ಮೂಟೆಗಳನ್ನು ಇಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

 

Follow Us:
Download App:
  • android
  • ios