ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು, ಸಿರವಾರ ಪಟ್ಟಣ ಉದ್ವಿಗ್ನ !

ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಈ ಘಟನೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಉದ್ವಿಗ್ನಗೊಳ್ಳುವಂತೆ ಮಾಡಿದೆ. ಕೆಲ ಕಿಡಿಗೇಡಿಗಳು ಬುಧವಾರ ಬೆಳ್ಳಂಬೆಳಗ್ಗೆ ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಘಟನೆ ಬೆಳಗ್ಗೆ ಜನರಿಗೆ ತಿಳಿಯುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Insult to Tipu Sultan's statue in Sirwar town at Raichur rav

ರಾಯಚೂರು (ಫೆ.1): ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಈ ಘಟನೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಉದ್ವಿಗ್ನಗೊಳ್ಳುವಂತೆ ಮಾಡಿದೆ.

ಕೆಲ ಕಿಡಿಗೇಡಿಗಳು ಬುಧವಾರ ಬೆಳ್ಳಂಬೆಳಗ್ಗೆ ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಘಟನೆ ಬೆಳಗ್ಗೆ ಜನರಿಗೆ ತಿಳಿಯುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆಯನ್ನು ಖಂಡಿಸಿ ಟಿಪ್ಪು ವೃತ್ತದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದರು. ವಿಧ್ವಂಸಕ ಕೃತ್ಯದ ಹಿಂದಿರುವವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸ್ಥಳದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ದುಷ್ಕರ್ಮಿಗಳ ಸುಳಿವು ಪಡೆಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

ಸಚಿವ ಎಂ.ಬಿ.ಪಾಟೀಲ್‌ ನಾಲ್ಕನೇ ಟಿಪ್ಪು ಸುಲ್ತಾನ್: ಶಾಸಕ ಬಸನಗೌಡ ಯತ್ನಾಳ

Latest Videos
Follow Us:
Download App:
  • android
  • ios