ಬೆಂಗಳೂರು(ಡಿ.12): ಮನೆ ಕೆಲಸಕ್ಕೆ ಬಂದು ಮನೆಗುಡಿಸಿ ಗುಂಡಾಂತರ ಮಾಡುತ್ತಿದ್ದ ಖತರ್ನಾಕ್‌ ಕಳ್ಳರನ್ನು ಬಂಧಿಸುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅನಂತ್ ಕುಮಾರ್, ರಮೇಶ್ ಚಂದ್ರ ಶಾಹೋ, ಬಿಶ್ವಜಿತ್ ಮಲ್ಲಿಕ್ ಹಾಗೂ ದುಲಾಲ್ ಸಿಂಗ್ ಎಂದು ಗುರುತಿಸಲಾಗಿದೆ. 

ಈ ಖದೀಮರು ನಗರದಲ್ಲಿ ಮನೆ ಕೆಲಸಕ್ಕೆಂದು ಬಂದು ಮಾಲೀಕರ ಮನೆ ಹಾಗೂ ಮತ್ತಿತರ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದನ್ನು ದೋಚುತ್ತಿದ್ದರು ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತ ಆರೋಪಿಗಳಿಂದ 64 ಲಕ್ಷ ಮೌಲ್ಯದ 1 ಕೆಜಿ 600 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಈ ಖದೀಮರು ಬೆಂಗಳೂರಿನಲ್ಲಿ ಚಿನ್ನಾಭರಣ ಕದ್ದು ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಡಗಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ಇಲ್ಲಿ  ಅಡಗಿಸಿಟ್ಟ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ನಗರದಲ್ಲಿ ನಡೆದಿದ್ದ 15 ಪ್ರಕರಣಗಳು ಬೆಳಕಿಗೆ ಬಂದಿವೆ.