ಸಿಸಿಬಿ (ಕೇಂದ್ರೀಯ ಕ್ರೈಂ ಬ್ರಾಂಚ್) ಪೊಲೀಸರು ಬೆಂಗಳೂರಿನ ಜೀವನಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜಸ್ಥಾನ ಮೂಲದ ಸಂತೋಷ್, ಯಶ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.

ಬೆಂಗಳೂರು (ಏ.10): ಸಿಸಿಬಿ (ಕೇಂದ್ರೀಯ ಕ್ರೈಂ ಬ್ರಾಂಚ್) ಪೊಲೀಸರು ಬೆಂಗಳೂರಿನ ಜೀವನಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜಸ್ಥಾನ ಮೂಲದ ಸಂತೋಷ್, ಯಶ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಗಳಿಂದ 5 ಲಕ್ಷ ರೂಪಾಯಿ ನಗದು, ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳು 'ದುಬೈ ಎಕ್ಸ್‌ಚೇಂಜ್' ಎಂಬ ಹೆಸರಿನಲ್ಲಿ ಬೆಟ್ಟಿಂಗ್ ರ‍್ಯಾಕೆಟ್ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ರಾಜಸ್ಥಾನದ ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಂಡು ಈ ಆರೋಪಿಗಳು ಆಟವಾಡಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣವನ್ನು ಜೀವನಭೀಮಾನಗರ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಕಾರ್ಯಾಚರಣೆಯು ಬೆಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳ ಮೇಲೆ ಹಿಡಿತ ಸಾಧಿಸುವ ಸಿಸಿಬಿ ಪೊಲೀಸರ ಪ್ರಯತ್ನದ ಭಾಗವಾಗಿದೆ.

ಇದನ್ನೂ ಓದಿ: ಸೈಬರ್ ಅಪರಾಧ ತಡೆ ಘಟಕ ಅಧಿಕೃತ ಸ್ಥಾಪನೆ: 43 ಸಿಇಎನ್‌ ಠಾಣೆಗೆ ಮರುನಾಮಕರಣ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬ್ಲಾಕ್ ಟಿಕೆಟ್ ಮಾರಾಟ;8 ಆರೋಪಿಗಳ ಬಂಧನ

ಬೆಂಗಳೂರು: ಇಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ರೋಚಕ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬ್ಲಾಕ್ ಮಾರುಕಟ್ಟೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಡಿಸಿಪಿ ಅಕ್ಕಯ್ ಮಚೇಂದ್ರ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಸಿಸಿಬಿ ಪೊಲೀಸರು ಮಾಹಿತಿಯ ಆಧಾರದ ಮೇಲೆ ಮಫ್ತಿಯಲ್ಲಿ ಕಾರ್ಯಾಚರಣೆ ಆರಂಭಿಸಿ, ಚಿನ್ನಸ್ವಾಮಿ ಸ್ಟೇಡಿಯಂ ಪರಿಸರದಲ್ಲಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಗುರುತಿಸಿ ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಲಾಗಿದೆ. ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಸದ್ಯ ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ:ಪ್ರೀತಿಗೆ ಇಷ್ಟೊಂದು ಭಯಾನಕ ಅಂತ್ಯವಿದೆಯೇ? ಈ ಘಟನೆ ಗ್ರಾಮಸ್ಥರು ಜೀವನದಲ್ಲಿ ಮರೆಯೋಲ್ಲ!

ಪೊಲೀಸರು ಈ ಬ್ಲಾಕ್ ಟಿಕೆಟ್ ಮಾರಾಟದ ಹಿಂದಿನ ಮೂಲ ಆರೋಪಿಗಳು ಮತ್ತು ಸಂಚು ಯಾರೆಂಬ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯು ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಅಕ್ರಮ ಟಿಕೆಟ್ ಮಾರಾಟದ ಸಮಸ್ಯೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ತನಿಖೆ ಮುಂದುವರಿದಂತೆ ಹೆಚ್ಚಿನ ಮಾಹಿತಿ ಬಹಿರಗೊಳ್ಳುವ ಸಾಧ್ಯತೆ ಇದೆ. 
ಈ ಕಾರ್ಯಾಚರಣೆಯಿಂದ ಕ್ರೀಡಾಭಿಮಾನಿಗಳಿಗೆ ನ್ಯಾಯ ಒದಗಿಸುವ ಜೊತೆಗೆ, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸರ ಶ್ರಮ ಸ್ಪಷ್ಟವಾಗಿದೆ.