ಶಿವಮೊಗ್ಗ ಜಿಲ್ಲೆಯಲ್ಲಿ ಐಸಿಸ್ ಲಿಂಕ್: ಮೂವರು ಶಂಕಿತ ಉಗ್ರರ ಬಂಧನ!
ಐಸಿಸ್ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಶಿವಮೊಗ್ಗದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ, (ಸೆಪ್ಟೆಂಬರ್.20): ಶಿಮೊಗ್ಗದಲ್ಲಿ ಮೂವರು ಶಂಕಿತ ಉಗ್ರರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಇಂಜಿನಿಯರಿಂಗ್ ವಿದ್ಯಾರ್ಥಿ ಯಾಸಿನ್ , ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶರಿಕ್ ಹಾಗೂ ಮಂಗಳೂರು ಮೂಲದ ಮಾಜ್ ಎನ್ನುವರನ್ನು ಇಂದು(ಮಂಗಳವಾರ) ಪೊಲೀಸರು ಬಂಧಿಸಿದ್ದಾರೆ. ಬಾಂಬ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಗೆ ತರಬೇತಿ ನೀಡಲಾಗುತ್ತಿದೆ ಎನ್ನು ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಅಲ್ಲದೇ. ಐಸಿಎಸ್ ಜೊತೆ ನಿಕಟ ಸಂಪರ್ಕ ಹೊಂದಿದ್ದವರ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್
ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿನ ಮೂವರು ಇನ್ಸ್ ಕ್ಟರ್ ಗಳ ತಂಡದಿಂದ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ನಿನ್ನೆ(ಸೋಮವಾರ) ರಾತ್ರಿಯೇ ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿಟ್ಟು ವಿಚಾರಣೆ ನಡೆಸಿದ್ದು, ಸ್ಫೋಟ ಅಂಶಗಳು ಬೆಳಕಿಗೆ ಬಂದಿವೆ.
ಶಿವಮೊಗ್ಗದಲ್ಲಿ ಶಂಕಿತ ಉಗ್ರ ಯಾಸಿನ್ ಐಸಿಎಸ್ ಜೊತೆ ನೇರ ಸಂಪರ್ಕ ಹೊಂದಿದ್ದು, ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಯಾಸಿನ್ ಉಗ್ರ ಕೃತ್ಯಕ್ಕೆ ತರಬೇತಿ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲಿ ಎ.ಎ.ವೃತ್ತದಲ್ಲಿ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯಲ್ಲಿ ಪ್ರೇಮ್ ಸಿಂಗ್ ಗೆ ಚೂರಿಯಿಂದ ಹಲ್ಲೆ ನಡೆಸಿದ ಜಬೀವುಲ್ಲ ಬಂಧಿಸಿದಾಗ ಆತನಿಗೆ ಉಗ್ರ ಸಂಘಟನೆಯ ಸಂಪರ್ಕ ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆಪ್ರಕರಣಕ್ಕೂಇದಕ್ಕೂ ನೇರ ಸಂಬಂದ ಇಲ್ಲದಿದ್ದರೂ ಪೊಲೀಸರ ತನಿಖೆಯ ವೇಳೆ ಯಾಸಿನ್ ಕೃತ್ಯದ ಕುರಿತು ಮಾಹಿತಿ ಸಿಕ್ಕಿತ್ತು. ಜಬೀವುಲ್ಲಾ ಮೊಬೈಲ್ ನಲ್ಲಿ ಉಗ್ರ ಸಂಘಟನೆಯ ಕುರಿತಾದ ಮಾಹಿತಿಗಳು ಸಹ ದೊರಕಿವೆ.
ಐಸಿಸ್ ಉಗ್ರರ ಜೊತೆ ನೇರ ಸಂಪರ್ಕ ಹೊಂದಿದ್ದಾರೆಂದು ಯಾಸಿನ್ ಕುರಿತು ಯುಎಪಿಎ ಕೇಸ್ ದಾಖಲಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈಗ ಪ್ರವೆನ್ಷನ್ ಆಫ್ ಇನ್ಸಲ್ಟ್ ಟು ನ್ಯಾಷನಲ್ ಹಾನರ್ ಆ್ಯಕ್ಟ್ – ಕಲಂ 2 ರಡಿ ಶಂಕಿತ ಉಗ್ರರ ಮೇಲೆ ಎಫ್‌ಐಆರ್ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರೇಮಸಿಂಗ್ ಚಾಕು ಇರಿದ ವಿಡಿಯೋ ಮೊಬೈಲ್‌ನಲ್ಲಿ
ಆಗಸ್ಟ್ 15ರಂದು ನಡೆದ ಪ್ರೇಮಸಿಂಗ್ ಚಾಕು ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಭದ್ರಾವತಿ ಡಿವೈಎಸ್ಪಿ ಜಿತೇಂದ್ರ ಅವರನ್ನ ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಡಿವೈಎಸ್ಪಿ ಜಿತೇಂದ್ರ ಅವರು ತಮ್ಮ ತನಿಖೆಯ ವೇಳೆ ಜಬೀವುಲ್ಲಾ ಮೊಬೈಲ್ ಪರಿಶೀಲನೆ ನಡೆಸಿದಾಗ ಉಗ್ರ ಸಂಘಟನೆಗಳ ಜತೆ ನಿರಂತರ ಸಂಪರ್ಕ ಹೊಂದಿರುವ ಮಾಹಿತಿ ಸಿಕ್ಕಿದೆ. ಅಲ್ಲದೇ ಪ್ರೇಮ್‌ಸಿಂಗ್‌ಗೆ ಚಾಕು ಇರಿದ ವಿಡಿಯೋ ಜಬೀವುಲ್ಲಾ ಮೊಬೈಲ್‌ನಲ್ಲಿ ಇರುವುದು ಪತ್ತೆಯಾಗಿದೆ.
ಶಿವಮೊಗ್ಗದಲ್ಲಿ ಎಸ್ಪಿ ಲಕ್ಷ್ಮಿ ಪ್ರಸಾದ್ ಹೇಳಿಕೆ
ಇನ್ನು ಶಂಕಿತ ಉಗ್ರರ ಬಂಧನಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದ್ದು, ಶಿವಮೊಗ್ಗದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಹೊಂದಿದ ಮೂವರು ಶಂಕಿತ ಉಗ್ರರ ವಿರುದ್ಧ ಎಫ್ಐಅರ್ ದಾಖಲು ಮಾಡಲಾಗಿದೆ
ಎಎಸ್ಪಿ ಹಿತೇಂದ್ರ ಕುಮಾರ್ ದೂರಿನ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಎಫ್ಐಅರ್ ದಾಖಲಿಸಲಾಗಿದೆ. ಶಿವಮೊಗ್ಗದ ಸಿದ್ದೇಶ್ವರ ನಗರದ ಯಾಸಿನ್, ತೀರ್ಥಹಳ್ಳಿಯ ಶರಿಕ್, ಮಂಗಳೂರಿನ ಮಾಜ್ ಬಂಧಿತ ಶಂಕಿತ ಉಗ್ರರು. ಯಾಸಿನ್ ಮತ್ತು ಮಾಜ್ ನನ್ನು ಶಿವಮೊಗ್ಗದ ಎರಡನೇ ಜೆಎಮ್ಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ 7 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ಪಡೆಯಲಾಗಿದೆ. ಐಸಿಸ್ ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಇದೆ ಎಂದು ಸ್ಪಷ್ಟಪಡಿಸಿದರು.