ಬೆಂಗಳೂರು: ಬಿಎಸ್ಸಿಯಲ್ಲಿ ಫೇಲ್‌ ಆಗಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆ..!

ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ ನಗರದ ಹೊರವಲಯದ ರೇವಾ ಯೂನಿವರ್ಸಿಟಿಯಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ ನೆಲೆಸಿದ್ದ. ಬಿಸ್ಸಿ ಮೊದಲ ವರ್ಷದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್‌ ಆಗಿದ್ದ. ಇದರಿಂದ ಮನನೊಂದು ಪಿ.ಜಿ.ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

jammu kashmir origin student committed self death in bengaluru grg

ಬೆಂಗಳೂರು(ಆ.13):  ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರ ಮೂಲದ ತನ್ವೀರ್‌(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಭಾನುವಾರ ಮಧ್ಯಾಹ್ನ ಪೋಷಕರು ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಪೇಯಿಂಗ್‌ ಗೆಸ್ಟ್‌ (ಪಿ.ಜಿ.) ಮಾಲೀಕರು ರೂಮ್‌ಗೆ ಬಳಿ ತೆರಳಿ ನೋಡಿದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ ನಗರದ ಹೊರವಲಯದ ರೇವಾ ಯೂನಿವರ್ಸಿಟಿಯಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ. ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ ನೆಲೆಸಿದ್ದ. ಬಿಸ್ಸಿ ಮೊದಲ ವರ್ಷದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್‌ ಆಗಿದ್ದ. ಇದರಿಂದ ಮನನೊಂದು ಪಿ.ಜಿ.ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಮಧ್ಯಾಹ್ನ ಪೋಷಕರು ತನ್ವೀರ್‌ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿಲ್ಲ. ಅನುಮಾನಗೊಂಡು ಪಿ.ಜಿ.ಮಾಲೀಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಪಿ.ಜಿ.ಮಾಲೀಕರು ರೂಮ್‌ಗೆ ತೆರಳಿ ನೋಡಿದಾಗ ತನ್ವೀರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ಸಿಗದ ನಿವೃತ್ತಿ ಸೌಲಭ್ಯ, ಜಿಗುಪ್ಸೆಗೊಂಡು ನಿವೃತ್ತ ಸರ್ಕಾರಿ ಅಧಿಕಾರಿ ಆತ್ಮಹತ್ಯೆ

ನನ್ನ ಸಾವಿಗೆ ನಾನೇ ಕಾರಣ: ಡೆತ್‌ ನೋಟ್‌

ಸ್ಥಳಕ್ಕೆ ದೌಡಾಯಿಸಿದ ಪೊಲೀಷರು, ಮೃತದೇಹವನ್ನು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಆಸ್ಪತ್ರೆಗೆ ರವಾಸಿದ್ದಾರೆ. ಬಳಿಕ ಜಮ್ಮು-ಕಾಶ್ಮೀರದಲ್ಲಿರುವ ಪೋಷಕರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳದಲ್ಲಿ ಮರಣಪತ್ರ ಸಿಕ್ಕಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿರುವುದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಮರಣಪತ್ರದಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ.

ಸೋಮವಾರ ಜಮ್ಮು-ಕಾಶ್ಮೀರದಿಂದ ಪೋಷಕರು ನಗರಕ್ಕೆ ಬಂದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios