ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ನಿಧನ/ ಕೆರೆಯಲ್ಲಿ ಮುಳುಗಿ ಸಾವು/ ತುಮಕೂರಿನ ಕ್ಯಾತ್ಸಂದ್ರದಲ್ಲಿ ದುರ್ಘಟನೆ/ ಆಂಗ್ಲ ದೈನಿಕವೊಂದರ ವರದಿಗಾರರಾಗಿದ್ದರು.

ತುಮಕೂರು[ಫೆ. 22] ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್ (39) ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತುಮಕೂರಿನ ಕ್ಯಾತ್ಸಂದ್ರದಲ್ಲಿ ದುರ್ಘಟನೆ ಸಂಭವಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಸಮೀಪದ ಸದರನಹಳ್ಳಿಯಲ್ಲಿ ತೋಟವೊಂದರ ಬಾವಿಯಲ್ಲಿ ರೋಹಿತ್‌ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ರೋಹಿತ್ ‘ಟೈಮ್ಸ್ ಆಫ್ ಇಂಡಿಯಾ’ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ‌ ಊರಾದ ಸದರನಹಳ್ಳಿಗೆ ಆಗಮಿಸಿದ್ದರು.

ಶನಿವಾರ ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಗೆ ಈಜಲು ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವಿಗೆ ಈಡಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ.