ಗೋ ಸಾಗಣೆ ವ್ಯಕ್ತಿ ಸಾವು: ಪುನೀತ್‌ ಕೆರೆಹಳ್ಳಿ ಅಂಡ್‌ ಟೀಮ್‌ಗೆ 7 ದಿನ ಪೊಲೀಸ್‌ ಕಸ್ಟಡಿ

ಗೋ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ಮತ್ತು ಸಹಚರರನ್ನು 7 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Kanakapura 7 days judicial custody for Puneeth Kerehalli and team sat

ರಾಮನಗರ (ಏ.09): ಗೋ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ಮತ್ತು ಆತನ ಜೊತೆಗಿದ್ದ ನಾಲ್ವರು ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 7 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರುಗಳನ್ನು ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕೆಲವು ದುಷ್ಕರ್ಮಿಗಳ ತಂಡವೊಂದು ಹಿಂದುತ್ವ ವಿರೋಧಿ ಕೃತ್ಯವೆಂದು ಆಕ್ರೋಶ ವ್ಯಕ್ತಪಡಿಸಿ ಗೋ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿತ್ತು. ಇನ್ನು ಹಲ್ಲೆ ಮಾಡಿದವರನ್ನು ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚಚರು ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು. ಈ ಬಗ್ಗೆ ವೀಡಿಯೋ ಸಾಕ್ಷಿ ಆಧಾರದ ಮೇಲೆ ಪೊಲೀಸರು ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರನ್ನು ಬಂಧಿಸಲು ಮುಂದಾದಾಗ ರಾಜಸ್ಥಾನಕ್ಕೆ ಪರಾರಿ ಆಗಿದ್ದರು. ಅವರನ್ನು ಹುಡುಕಿ ಹೊರಟ ಪೊಲೀಸರ ತಂಡವು ರಾಜಸ್ಥಾನಲ್ಲಿ ಬಂಧಿಸಿ ರಾಜ್ಯಕ್ಕೆ ಕರೆ ತಂದಿತ್ತು.

ಗೋ ರಕ್ಷಣೆ ಮಾಡ್ತೀನಿ ಅಂತ ಹೆಣ ಬೀಳಿಸಿದನಾ ಪುನೀತ್ ಕೆರೆಹಳ್ಳಿ? ರಾಜಸ್ಥಾನದಲ್ಲಿ ಸಿಕ್ಕಿಬಿದ್ದ ಕಥೆ ಗೊತ್ತಾ..?

ಇದಾದ ನಂತರ ಪುನೀತ್‌ ಕೆರೆಹಳ್ಳಿ ಮತ್ತು ಇತರೆ ನಾಲ್ವರು ಆರೋಪಿಗಳನ್ನು ಎರಡು ದಿನ ವಿಚಾರಣೆ ನಡೆಸಿದ ಪೊಲೀಸರು ಇಂದು ಕನಕಪುರ ಜೆಎಂಎಫ್ ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಧೀಶರು ಹೆಚ್ಚಿನ‌ ವಿಚಾರಣೆಗೆ ಐವರು ಆರೋಪಿಗಳನ್ನು 7 ದಿನಗಳ‌ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇನ್ನು ಪುನೀತ್ ಕೆರಹಳ್ಳಿ ಪರವಾಗಿ ವಕಾಲತ್ತು ವಹಿಸಿದ್ದ ಇಬ್ಬರು ಬೆಂಗಳೂರು ಮೂಲದ ವಕೀಲರ ವಾದವನ್ನು ಆಲಿಸಿದ್ದಾರೆ. 

ರಾಮನಗರ ಪೊಲೀಸರು ಕಳೆದ ನಾಲ್ಕು ದಿನಗಳ ಹಿಂದೆ ರಾಜಸ್ಥಾನದಲ್ಲಿ ಆರೋಪಿಗಳನ್ನ ಬಂಧಿಸಿದ್ದರು. ಈ ವೇಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗೆ ಆರೊಪಿಗಳನ್ನು ಪೊಲೀಸ್‌ ಕಷ್ಟಡಿಗೆ ಪಡೆಯಲು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಇನ್ನೂ ಒಂದು ವಾರಗಳ ಕಾಲ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರಿಗೆ ಜೈಲೇ ಗತಿಯಾಗಿದೆ. 

ರಾಷ್ಟ್ರೀಯ ಗೋವು ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್, ಸುರೇಶ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.

ಗೋ ಸಾಗಾಟಗಾರನ ಕೊಲೆ ಆರೋಪ, ತಲೆ ಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಮತ್ತು ಸಹಚರರು ರಾಜಸ್ಥಾನದಲ್ಲಿ ಅರೆಸ್ಟ್

ಪುನೀತ್ ಕೆರೆಹಳ್ಳಿ ವಿರುದ್ಧ ಈಗಾಗಲೇ 11ಕ್ಕೂ ಹೆಚ್ಚು ಪ್ರಕರಣ: ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾ.31ರಂದು ಈ ಪ್ರಕರಣ ನಡೆದಿತ್ತು. ಪ್ರಕರಣ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಸಹಚರರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾಜಸ್ಥಾನದ ಬಾರ್ಡರ್ ಜಿಲ್ಲೆಯಾದ ಬನಸ್ವಾರದಲ್ಲಿ ಐವರನ್ನ ಬಂಧಿಸಲಾಗಿದೆ. ಗುಜರಾತ್ ಹಾಗೂ ರಾಜಸ್ಥಾನ ಪೊಲೀಸರ ಸಹಾಯದಿಂದ ಬಂಧನವಾಗಿದೆ. ಪುನೀತ್ ಕೆರೆಹಳ್ಳಿ(A1), ಗೋಪಿ(A2), ಪವನ್ ಕುಮಾರ್(A3),ಪಿಲ್ಲಿಂಗ್ ಅಂಬಿಗಾರ್(A4), ಸುರೇಶ್ ಕುಮಾರ್(A5) ಬಂಧಿತ ಆರೋಪಿಗಳು.

ಪುನೀತ್ ಕೆರೆಹಳ್ಳಿ ವಿರುದ್ಧ ಈಗಾಗಲೇ 11ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಎಲ್ಲಾ ಪ್ರಕರಣಗಳ ಕುರಿತು ತನಿಖೆ ನಡೆಯುತ್ತಿದೆ. ಕಳೆದ 5ದಿನಗಳಿಂದ ಪೋನ್ ಸ್ವೀಚ್ ಆಫ್ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಗಳ ಬಂಧನವಾಗಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios