ಕಾನ್ಪುರ(ಜು.10): ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿವೈ ಎಸ್​ಪಿ ಸೇರಿದಂತೆ 8 ಮಂದಿ ಪೊಲೀಸರ ಹತ್ಯೆಗೈದು ತಲೆ ಮರೆಸಿಕೊಂಡಿದ್ದ ಗ್ಯಾಂಗ್‌ಸ್ಟರ್  ವಿಕಾಸ್ ದುಬೆಯನ್ನು ಬಂಧಿಸುವಲ್‌ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ಆತನನ್ನು ಕರೆದೊಯ್ಯುತ್ತಿದ್ದಾಗ ಕಾರು ಪಲ್ಟಿಯಾಗಿ ವಿಕಾಸ್‌ ದುಬೆ ಮತ್ತೆ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಅವನನ್ನು ಎನ್​ಕೌಂಟರ್ ಮಾಡಲಾಗಿದೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್‌ಸ್ಟರ್ ವಿಕಾಸ್ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯುತ್ತಿತ್ತು. ಆದರೆ ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಬೆಂಗಾವಲಿನ ವಾಹನಗಳಲ್ಲಿ ಒಂದು ಪಲ್ಟಿಯಾಗಿದೆ. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಗನ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದು, ದುಬೆ ಹತನಾಗಿದ್ದಾನೆ. 

ಕಾನ್ಪುರ ಬಳಿ ವಿಕಾಸ್ ದುಬೆ ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಯಲ್ಲಿ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಹತನಾಗಿದ್ದಾನೆ.