Asianet Suvarna News Asianet Suvarna News

ಯಾದಗಿರಿ: ಪ್ರತ್ಯೇಕ ಅಪಘಾತ ಮೂವರು ದುರ್ಮರಣ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

Karnataka crime news 3 people died in a separate accident rav
Author
First Published May 9, 2024, 8:45 PM IST

ಯಾದಗಿರಿ (ಮೇ.9): ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ದೇವಿಕೆಮ್ಮ ನಾಯ್ಕೋಡಿ (60) ಮೃತ ವೃದ್ಧೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತ. ಇನ್ನು ಶಹಾಪುರದ ಡಿಗ್ರಿ ಕಾಲೇಜು ಬಳಿ ನಡೆದ ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಮರಾಯ ಮಡ್ನಾಳ್(55) ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ ಸಹಾಪುರ ಪೊಲೀಸರು. ಬಳಿಕ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಶಹಾಪುರ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ; ವರದಕ್ಷಿಣೆಗಾಗಿ ಪತಿಯಿಂದಲೇ ಕೊಲೆ ಶಂಕೆ

ಅಪರಿಚಿತ ಕಾರು ಡಿಕ್ಕಿ; ಬೈಕ್ ಸವಾರ ದುರ್ಮರಣ:

ದಾವಣಗೆರೆ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿ ನಡೆದಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಟಿವಿಎಸ್ ಗಾಡಿಯಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಫಾರ್ಚುನರ್ ಕಾರು ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ಬಳಿಕ ಕಾರು ನಿಲ್ಲಿಸದೇ ಪರಾರಿಯಾಗಿರುವ ಅಪರಿಚಿತ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Videos
Follow Us:
Download App:
  • android
  • ios