ಬೆಂಗಳೂರು, (ಮಾ.10): ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡುತ್ತಿರುವ ರಮೇಶ್​ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದ ತನಿಖೆನ್ನು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆಗೆ (ಎಸ್​ಐಟಿ) ವಹಿಸಿದೆ. 

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ತಿರುವುಗಳ ಮಧ್ಯೆ ಸಿಡಿ ಕೇಸ್; ದೂರೇ ಇಲ್ಲದೆ ಮೇಲೆ ತನಿಖೆ ಎಲ್ಲಿಂದ?

ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿ.ಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಮಾರ್ಚ್ 2 ರಂದು ದಿನೇಶ್ ಕಲ್ಲಹಳ್ಳಿ ಎನ್ನುವರು, 'ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಹೇಳಿ, ಅವಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅವಳಿಗೆ ಮತ್ತು ಅವಳ ಕುಟುಂಬದವರಿಗೆ ಬೆದರಿಕೆ ಹಾಕಲಾಗುತ್ತಿದೆ' ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಬಳಿಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಕೊಟ್ಟಿದ್ದ ಸಾಮಾಜಿಕ ಹೋರಾಟಗಾರ ದಿನೇಶ್  ದೂರನ್ನು ಹಿಂದಕ್ಕೆ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.