Asianet Suvarna News Asianet Suvarna News

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ!

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್  ಪ್ರತಿಮಾ ಎಂಬವರನ್ನು ಹತ್ಯೆ ಮಾಡಲಾಗಿದೆ.

Karnataka Mines and Geology Department women Director Pratima murdered in bengaluru gow
Author
First Published Nov 5, 2023, 10:11 AM IST

ಬೆಂಗಳೂರು (ನ.5): ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್  ಪ್ರತಿಮಾ (45) ಎಂಬವರನ್ನು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೆಂಡತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿದ್ದನ್ನು ಕಣ್ಣಾರೆ ಕಂಡ ಪತಿ ಹಾರ್ಟ್ ಅಟ್ಯಾಕ್‌ಗೆ ಬಲಿ

ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ರಾತ್ರಿ 8 ಗಂಟೆಗೆ ಕಛೇರಿಯಿಂದ ಮನೆಗೆ ಚಾಲಕ ಡ್ರಾಪ್‌ ಮಾಡಿ ತೆರಳಿದ ಬಳಿಕ ಹಂತಕರು  ಬಂದು ಕೊಲೆ ಮಾಡಿ ಹೋಗಿದ್ದಾರೆ. ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವ ಕಾರಣ ಮೇಲ್ನೋಟಕ್ಕೆ ಇದು ಪಕ್ಕಾ ಪ್ಲಾನ್ ಮಾಡಿ, ಪರಿಚಿತರೇ ಈ ಕೃತ್ಯ  ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 

ಕಿರುಕುಳಕ್ಕೆ ಸುಳ್ಯ ಉದ್ಯಮಿ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ, ಸಾವಿನ ಬಳಿಕ ಗೋವಾದಲ್ಲಿ ಗಂಡನ ಮನೆಯವರ ಪಾರ್ಟಿ!

ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ  ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯಲ್ಲಿ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ. 

18 ವರ್ಷದ ಸುಂದರ ದಾಂಪತ್ಯ: ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿರುವ ಗಂಡ ಮತ್ತು ಮಗ ವಾಸವಿದ್ದಾರೆ.  ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇವರ ದಾಂಪತ್ಯಕ್ಕೆ 15 ವರ್ಷದ ಎಸ್ ಎಸ್ ಎಲ್ ಸಿ ಓದುವ ಮಗನಿದ್ದಾನೆ. ತುಡುಕಿಯಲ್ಲಿ ಇತ್ತೀಚಿಗೆ ಹೊಸ ಮನೆ ಯೊಂದನ್ನು ಕಟ್ಟಿಸಿ ಗೃಹಪ್ರವೇಶ ಮಾಡಿದ್ದರು. ಸುಮಾರು ಎರಡು ಎಕರೆಯಷ್ಟು ಅಡಿಕೆ ತೋಟ ಇರುವ ಹಿನ್ನೆಲೆಯಲ್ಲಿ ಅಡಿಕೆ ಕೊಯ್ಲು ಮಾಡಿಸುವ ಸಲುವಾಗಿ ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ಇದ್ದರು. ಪ್ರತಿಮಾ ಹಾಗೂ ಸತ್ಯನಾರಾಯಣ ಅವರ ದಾಂಪತ್ಯ ಜೀವನ ಅನ್ಯೊನ್ಯವಾಗಿತ್ತು. ಪತ್ನಿಯ ಕೊಲೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪತಿ ಸತ್ಯನಾರಾಯಣ ಪ್ರಯಾಣಿಸಿದ್ದಾರೆ.

Follow Us:
Download App:
  • android
  • ios