ಮೊನ್ನೇ ಫೇಸ್‌ಬುಕ್ ಈಗ ಟ್ವಿಟ್ಟರ್ ಖಾತೆಗೆ ಕನ್ನ: ಸೈಬರ್ ಸೆಲ್ ಮೊರೆ ಹೋದ ಸಚಿವ ನಿರಾಣಿ

* ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್
* ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಮುರುಗೇಶ್ ನಿರಾಣಿ
* ಮೊನ್ನೇ ಅಷ್ಟೇ ಮುರುಗೇಶ್ ನಿರಾಣಿ ಅವರ ಫೇಸ್‌ಬುಕ್ ಹ್ಯಾಕ್ ಮಾಡಲಾಗಿತ್ತು

Karnataka Minister Murugesh Nirani Twitter account hacked rbj

ಬೆಂಗಳೂರು, (ಸೆ.21): ಮೊನ್ನೇ ಅಷ್ಟೇ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ನಿರಾಣಿ ಅವರ ಫೇಸ್‌ಬುಕ್ ಅಕೌಂಟ್ ಹ್ಯಾಕ್ ಮಾಡಿರುವುದು  ಬೆಳಕಿಗೆ ಬಂದಿತ್ತು, ಇದರ ಬೆನ್ನಲ್ಲೇ ಇದೀಗ ಸಚಿವ ಮುರುಗೇಶ್ ನಿರಾಣಿ ಅವರ ಟ್ವಿಟ್ಟರ್ ಖಾತೆ (@NiraniMurugesh) ಹ್ಯಾಕ್ ಮಾಡಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ನಿರಾಣಿ,  ನನ್ನ ಟ್ವಿಟರ್ ಖಾತೆ @NiraniMurugesh ಯನ್ನು ಕೆಲವರು ‌ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ ಎಂದಿದ್ದಾರೆ.

ಇನ್‌ಸ್ಟಾಗ್ರಾಂ ಹ್ಯಾಕ್ ಆಗದಂತೆ ತಡೆಯಲು ಈ ಸಿಂಪಲ್ ಟ್ರಿಕ್ಸ್ ಬಳಸಿ..!

ಹ್ಯಾಕರ್‌ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವಿಟರ್‌ ಗೆ ದೂರು ನೀಡಿದ್ದು, ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
Karnataka Minister Murugesh Nirani Twitter account hacked rbj

Latest Videos
Follow Us:
Download App:
  • android
  • ios