Asianet Suvarna News Asianet Suvarna News

ಉಡುಪಿಯ ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಆರೋಪಿ ಬೆಳಗಾವಿಯಲ್ಲಿ ಅರೆಸ್ಟ್‌!

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಕುಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Karnataka Police has arrested the murder accused of Udupi family in Belagavi sat
Author
First Published Nov 14, 2023, 6:31 PM IST

ಬೆಳಗಾವಿ (ನ.14): ದೀಪಾವಳಿ ಹಬ್ಬದಂದು ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಕುಕೃತ್ಯವನ್ನು ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಅರೆಸ್ಟ್‌ ಮಾಡಿದ್ದಾರೆ.

ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಆಡಿ ಪರಾರಿ ಆಗಿದ್ದನು. ಈತನ ಬೆನ್ನು ಬಿದ್ದಿದ್ದ ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಮೇಲೆ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ.

ಉಡುಪಿಯ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಿಕ್ತು ರೋಚಕ ಸುಳಿವು: ಕೊಲೆಗಡುಕನ ಕ್ಲ್ಯೂ ಕೊಟ್ಟ ಆಟೋ ಡ್ರೈವರ್!

ಉಡುಪಿಯಲ್ಲಿ ನಾಲ್ವರ ಹತ್ಯೆಗೈದಿದ್ದ ಹಂತಕ ಬೆಳಗಾವಿಯಲ್ಲಿ ಅರೆಸ್ಟ್ ಆಗಿದ್ದಾನೆ. ಉಡುಪಿ ಹಾಗೂ ಬೆಳಗಾವಿ ಪೊಲೀಸರ ಮಿಂಚಿನ ಕಾರ್ಯಾಚರಣೆ ಮಾಡಿದ್ದರು. ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧನವಾಗಿದೆ. ಇನ್ನು ಕೊಲೆ ಆರೋಪಿಯನ್ನು ಬಂಧಿಸಿರುವ ಬಗ್ಗೆ ಸುವರ್ಣ ನ್ಯೂಸ್‌ಗೆ ಪೊಲೀಸ್ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

 

ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಇಂದು ಬೆಳಗ್ಗೆ (ಭಾನುವಾರ) ನಡೆದಿದೆ. ಹಸೀನಾ(46), ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಒಂದೇ ಘಟನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆಯ ಹಿಂದೆ ವಿವಿಧ ಆಯಾಮಗಳ ಅನುಮಾನವನ್ನು ವ್ಯಕ್ತಪಡಿಸಿ ಕೊಲೆ ಪಾತಕಿಯ ಶೋಧಕ್ಕೆ ಮುಂದಾಗಿದ್ದರು.

ಒಂದಲ್ಲ ಎರಡಲ್ಲ..ಅಲ್ಲಿ ಬಿದ್ದಿದ್ದು 4 ಹೆಣಗಳು: ದೀಪಾವಳಿ ದಿನ ರಕ್ತದೋಕುಳಿ ಆಡಿದ್ದ ಹಂತಕ..!

ಕೊಲೆ ಆರೋಪಿ ಪ್ರವೀಣ್‌ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದನು. ಮೃತಳಾದ ಹಸೀನಾಳ ಗಂಡ ಬೇರೆ ದೇಶದಲ್ಲಿ ಕೆಲಸ ಮಾಡತ್ತಿದ್ದಾನೆ. ಈಕೆಯ ಇಬ್ಬರು ಮಕ್ಕಳು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಎಲ್ಲ ಕಚೇರಿಗಳಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಉಡುಪಿಯ ಮನೆಗೆ ತೆರಳಿದ್ದರು. ಈ ವೇಳೆ ಅವರ ಮನೆಗೆ ತೆರಳಿದ್ದ ಪ್ರವೀಣ್‌ ಚೌಗಲೆ ಸಿಕ್ಕ ಸಿಕ್ಕವರನ್ನು ಚಾಕುವಿನಿಂದ ಕುತ್ತಿಗೆ ಹಾಗೂ ಎದೆ ಸೇರಿದಂತೆ ಸಿಕ್ಕ ಸಿಕ್ಕಲ್ಲೆಲ್ಲಾ ಕೊಯ್ದು ಕೊಲೆ ಮಾಡಿದ್ದನು. ಮಹಿಳೆ, ಮಕ್ಕಳು ಎನ್ನುವುದನ್ನೂ ನೋಡದೆ ಕೊಲೆಗೈದು ಪರಾರಿ ಆಗಿದ್ದನು. ಈತ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯವನು ಎಂದು ಹೇಳಲಾಗುತ್ತಿದೆ.

Follow Us:
Download App:
  • android
  • ios