Asianet Suvarna News Asianet Suvarna News

ಕಾರವಾರದಲ್ಲಿ ಅರೆಬೆಂದ ಸ್ಥಿತಿಯಲ್ಲಿ 35 ವರ್ಷದ ಮಹಿಳೆ ಶವ ಪತ್ತೆ!

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೇ ನಿಲ್ದಾಣದ ಹಿಂಬದಿಯಲ್ಲಿ ಸುಮಾರು 35 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ತಲೆ ಮತ್ತು ಬೆನ್ನಿನ ಭಾಗ ಸುಟ್ಟ ಸ್ಥಿತಿಯಲ್ಲಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. 

Karwar middle age woman dead body found near shiravada railway station sat
Author
First Published Sep 4, 2024, 6:06 PM IST | Last Updated Sep 4, 2024, 6:06 PM IST

ಉತ್ತರಕನ್ನಡ (ಸೆ.04): ಪೆಟ್ರೋಲ್ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸಂಪೂರ್ಣವಾಗು ಸುಟ್ಟು ಕರಕಲಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೇ ನಿಲ್ದಾಣದ ಹಿಂಬದಿಯಲ್ಲಿ ಪತ್ತೆಯಾಗಿದೆ. ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸುಟ್ಟು ಕರಕಲಾಗಿವೆ. ಪ್ಯಾಂಟ್ ಧರಿಸಿರುವ ಮಹಿಳೆಯ ಸೊಂಟದ ಮೇಲ್ಬಾಗದಲ್ಲಿ ಯಾವುದೇ ಬಟ್ಟೆ ಇಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಶ್ವಾನದಳವನ್ನೂ ಕರೆತಂದಿದ್ದು, ಆರೋಪಿಗಳ ಪತ್ತೆ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.

ಆಹಾ ನನ್ನ ಮದ್ವೆಯಂತೇ.., ಎಂದು ಖುಷಿಯಲ್ಲಿದ್ದ ವರನಿಗೆ ಮದುವೆ ಚಪ್ಪರದಲ್ಲಿಯೇ ಹಾರ್ಟ್ ಅಟ್ಯಾಕ್!

ಇನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ಗ್ರಾಮದ ಸಂಜನಾ ಗಜಾನನ ತಳೇಕರ ಎಂಬವರ ಮೃತದೇಹವಾಗಿದೆ. ಮೃತ ದೇಹದ ಪಕ್ಕದಲ್ಲಿದ್ದ ಬ್ಯಾಗ್‌ ತೆರೆದು ನೋಡಿದಾಗ ಅದರಲ್ಲಿದ್ದ ಆಧಾರ ಕಾರ್ಡ್ ಮೂಲಕ ಗುರುತು ಪತ್ತೆ ಮಾಡಲಾಗಿದೆ. ಆಧಾರ್ ಕಾರ್ಡ್ ಮೂಲಕ ಆಕೆಯ ಗಂಡನನ್ನು ಪೊಲೀಸರು ಸಂಪರ್ಕ ಮಾಡಿದ್ದು, ಈಕೆ ನನ್ನ ಹೆಂಡತಿ ಎಂದು ಗಜಾನನ ತಳೇಕರ್ ಗುರುತಿಸಿದ್ದಾನೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂತರ ವಿಚಾರಣೆಗಾಗಿ ಪೊಲೀಸರು ಮೃತ ಮಹಿಳೆಯ ಗಂಡ ಗಜಾನನ ತಳೇಕರನನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಬೆಳಗಾವಿ/ಚಿಕ್ಕೋಡಿ (ಸೆ.04): ನಾಳೆ ಬೆಳಗಾದರೆ ಸಾಕು ನನಗೂ ನಿನಗೂ ಮದುವೆ ಎಂದು ಖುಷಿಯಿಂದ ಹುಡುಗಿಯೊಂದಿಗೆ ಯುವಕ ಮದುವೆ ಸಿದ್ಧತೆ ಬಗ್ಗೆ ಚಪ್ಪರದಲ್ಲಿ ನಿಂತುಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.  ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ ದುರ್ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಝುಂಜರವಾಡ  ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತ ದುರ್ದೈವಿ ಆಗಿದ್ದಾನೆ. ಸಂಬಂಧಿಕರು ಹಾಗೂ ಕುಟುಂಬಸ್ಥರು ಸೆ.5ರಂದು ಮದುವೆಗೆ ದಿನಾಂಕ ನಿಗದಿ ಮಾಡಿದ್ದರು. ಹೀಗಾಗಿ, ಮದುವೆ ಕೆಲಸದ ಬಗ್ಗೆ ದೂರವಾಣಿಯಲ್ಲಿ ಹೆಚ್ಚು ಮಾತನಾಡಿದ್ದನು. ಇದರ ನಂತರ ಯುವತಿಯೊಂದಿಗೂ ಮದುವೆ ಸಿದ್ಧತೆ ಬಗ್ಗೆ ಮಾತನಾಡುವಾಗ ಯುವಕನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.

ದಲಿತ ಯುವತಿ ಮನೆ ಸೊಸೆಯಾದಳೆಂದು, ಹಂದಿಗೂಡಿನಲ್ಲಿಟ್ಟು ವಿಷವಿಕ್ಕಿ ಕೊಂದರಾ ಪಾಪಿಗಳು!

ಇನ್ನು ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆ ಮುಂದೆ ಮದುವೆ ಸಿದ್ಧತೆ ಮಾಡಿಕೊಳ್ಳುತ್ತಾ, ಮೊಬೈಲ್‌ನಲ್ಲಿ ಮಾತನಾಡುವಾಗ ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆತನನ್ನು ತುರ್ತಾಗಿ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರು ಅದಾಗಲೇ ಯುವಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios