Breaking: ಪರೀಕ್ಷೆ ವೇಳೆಯಲ್ಲಿಯೇ ಕೊಡಗಿನ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಕಳೆದೊಂದು ವಾರದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.

Kodagu 7th standard student hanging at home on exam time sat

ಕೊಡಗು (ಮಾ.19): ರಾಜ್ಯದಲ್ಲಿ ಪರೀಕ್ಷೆಗಳು ಆರಂಭವಾದ ಕಳೆದೊಂದು ವಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜ್ಯಾದ್ಯಂತ ಮಾ.13 ರಿಂದ ವಾರ್ಷಿಕ ಪರೀಕ್ಷೆಗಳು ಆರಂಭವಾಗಿವೆ. 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ (5 ಮತ್ತು 8ನೇ ತರಗತಿ ಬಿಟ್ಟು) ಪರೀಕ್ಷೆಗಳು ನಡೆಯುತ್ತಿದ್ದು, ಎಲ್ಲರೂ ಪರೀಕ್ಷೆಯ ಮೂಡ್‌ನಲ್ಲಿದ್ದಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಆದರೆ, ಮನೆಯವರು ಯಾವ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂಬುದು ಮಾತ್ರ ಈವರೆಗೆ ಯಾರಿಗೂ ಗೊತ್ತಾಗಿಲ್ಲ.

Exam Date: 5, 8ನೇ ತರಗತಿ ಬೋರ್ಡ್‌ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಪೂರ್ಣ ಮಾಹಿತಿ

ಒಂದು ವಾರದಿಂದ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ: ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಅಕ್ಷತ ದಂಪತಿಯ ಪುತ್ರಿ ಆಗಿದ್ದಳು. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ ಓದುತ್ತಿದ್ದಳು. ಆದರೆ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ವೈಷ್ಣವಿ ತೀವರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.

ಓದಿಕೊಳ್ಳಲು ಬಿಟ್ಟರೆ ಆತ್ಮಹತ್ಯೆ ಮಾಡಿಕೊಂಡ ಮಗಳು: ಇಂದು ಭಾನುವಾರ ರಜಾ ದಿನವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳನ್ನೇ ಓದಿಕೊಳ್ಳುವಂತೆ ಬಿಟ್ಟು ಪಾಲಕರು ಹೊರಗೆ ಹೋಗಿದ್ದಾರೆ. ಆದ್ದರಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈಕೆ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳುವ ದೃಢ ನಿರ್ಧಾರಕ್ಕೆ ಬಂದಿದ್ದಾಳೆ. ಅದರಂತೆ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಮಗಳ ಸಾವನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಎಕ್ಸ್‌ಪ್ರೆಸ್‌ ವೇ ಟೋಲ್‌ ತಪ್ಪಿಸಲು ಒನ್‌ವೇನಲ್ಲಿ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌: ಬೈಕ್‌ಗೆ ಗುದ್ದಿ ಸವಾರ ಸಾವು

ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲು: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರಿತಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ. ಜೊತೆಗೆ, ಪೊಲೀಸರ ತನಿಖೆಯಿಂದ ಶಾಲೆಯಲ್ಲಿ ಯಾರಾದರೂ ಕಿರುಕುಳ ನೀಡುತ್ತಿದ್ದರೇ ಅಥವಾ ಬೇರೆ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಸತ್ಯ ಬಯಲಿಗೆ ಬರಲಿದೆ. ಆದರೆ, ಶಾಲೆ, ಮನೆ, ಸ್ನೇಹಿತರು ಹಾಗೂ ಇತರೆ ಯಾವುದೇ ವೈಯಕ್ತಿಕ ವಿಚಾರಗಳನ್ನು ಮಕ್ಕಳು ತಮ್ಮ ಪಾಲಕರೊಂದಿಗೆ ಹಂಚಿಕೊಂಡಲ್ಲಿ ಇಂತಹ ಘಟನೆಗಳು ನಡೆಯುವುದು ತಗ್ಗುತ್ತದೆ. ಇಂತಹ ಘಟನೆಗಳಿಂದ ಮಕ್ಕಳೊಂದಿಗೆ ಪಾಲಕರು ಸ್ನೇಹಿತರಂತೆ ಇರಬೇಕು ಎನ್ನುವ ಮಾತು ಮತ್ತೆ ಮುನ್ನೆಲೆಗೆ ಬರುತ್ತದೆ.

Latest Videos
Follow Us:
Download App:
  • android
  • ios