ಸೋದರನಿಗೆ ಕೊರೋನಾ ಸೋಂಕು ದೃಢವಾಗಿರುವ ವಿಚಾರ ತಿಳಿಯುತ್ತಲೇ ಭಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೋಲಾರ, (ಜುಲೈ.19): ತಮ್ಮನಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಘಾತಗೊಂಡು ಅಣ್ಣನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ನಾಗರಾಜ್ (37) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ತಮ್ಮನಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
ಬಿಡುಗಡೆ ದಿನವೇ ಸೋಂಕಿತೆ ಸಾವಿಗೆ ಶರಣು: ಆಸ್ಪತ್ರೆಯಲ್ಲೇ ಆತ್ಮಹತ್ಯೆ
ಈ ಹಿನ್ನೆಲೆಯಲ್ಲಿ ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತ ನಾಗರಾಜ್ ಮಾತ್ರ ದುಡುಕಿನ ನಿರ್ಧಾರಕ್ಕೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೊರೋನಾ ತಗುಲಿರುವ ತಮ್ಮನೊಡನೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ತನಗೂ ಸಹ ಸೋಂಕು ತಗುಲಿರಬಹುದೆಂದು ಭಯಗೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರ ಕುಟುಂಬಸ್ಥರು ಹೇಳಿಕೆ ಕೊಟ್ಟಿದ್ದಾರೆ.
ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
