ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಬಳಿಯ ವಡ್ಡಿ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಬಳ್ಳಾರಿಯಿಂದ ಕುಮಟಾಕ್ಕೆ ತೆರಳುತ್ತಿದ್ದ ಬಸ್‌ನಲ್ಲಿದ್ದ ಚಾಲಕ, ನಿರ್ವಾಹಕ ಸೇರಿದಂತೆ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರವಾರ, ಉತ್ತರಕನ್ನಡ (ಅ.18): ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಬಳಿಯ ವಡ್ಡಿ ಘಾಟ್‌ನಲ್ಲಿ ನಡೆದಿದೆ.

ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳ್ಳಾರಿಯಿಂದ ಕುಮಟಾಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಸ್‌ನಲ್ಲಿದ್ದ 49 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು:

ಬಸ್‌ನಲ್ಲಿ 49 ಪ್ರಯಾಣಿಕರಿದ್ದರು ಭಾರೀ ಅನಾಹುತವೊಂದು ತಪ್ಪಿದೆ. ಈ ದುರ್ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 49 ಪ್ರಯಾಣಿಕರಿಗೆ ಗಾಯ ಗಾಯಗೊಂಡಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಅಂಕೋಲಾ ಠಾಣಾ ಪೊಲೀಸರು ತಕ್ಷಣ ಆಗಮಿಸಿ, ಗಾಯಾಳುಗಳನ್ನು ಅಂಕೋಲಾ ಹಾಗೂ ಕುಮಟಾ ಸರಕಾರಿ ಆಸ್ಪತ್ರೆಗಳಿಗೆ ರವಾನಿಸಿದರು. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆ ನೀಡಲಾಗಿದೆ.

ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರಂತವು ಹೇಗೆ ಸಂಭವಿಸಿತು ಹದಗೆಟ್ಟ ರಸ್ತೆಯೇ? ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ನಡೆಯಿತೇ ಪೊಲೀಸರ ಪರಿಶೀಲನೆ ಬಳಿಕ ತಿಳಿಯಲಿದೆ.