ರಾಯಬಾಗ ತಾಲೂಕಿನ ಕುಡಚಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ರಸ್ತೆ ಮಧ್ಯೆ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕಾಗಿ ಬಂಧಿತರಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕೋಡಿ (ಜೂ.30): ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ರಸ್ತೆ ಮಧ್ಯೆದಲ್ಲೇ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯತ್‌ ಸದಸ್ಯನೊಬ್ಬ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ.

ಕುಡಚಿ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂಧಿತ ವ್ಯಕ್ತಿ. 2 ದಿನಗಳ‌ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಟ್ಟುಹಬ್ಬ ಆಚರಣೆ ಅಂಗವಾಗಿ ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲಿ ಆತನ ಅಕ್ಕಪಕ್ಕದಲ್ಲಿ ಕೈಯಲ್ಲಿ ಚಾಕು ಹಿಡಿದು ಕುಣಿಯುತ್ತಾ, ಸಾರ್ವಜನಿಕವಾಗಿ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್‌ ಆದ ಬಳಿಕ ಬಳಿಕ, ಕುಡಚಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.