ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮಾರಾಮಾರಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದಲ್ಲಿ ನಡೆದಿದೆ.

ಕೋಲಾರ (ಜೂ.24) : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮಾರಾಮಾರಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಯುವಕ ಪ್ರಸಾದ್ ರೆಡ್ಡಿ (25) ಮೃತ ದುರ್ದೈವಿ. ಕೊಲೆ ಆರೋಪಿ ಕಿರಣ್ ರೆಡ್ಡಿ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಪ್ರಸಾದ ರೆಡ್ಡಿಸಾವಿನ ನಂತರ ತಾನಾಗೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಜಮೀನು ಸಂಬಂಧ ಎರಡು ಕುಟುಂಬಗಳ ನಡುವೆ ವಿವಾದವಿತ್ತು. ಇದೇ ಕಾರಣಕ್ಕೆ ಆಗಾಗ ಸಣ್ಣಪುಟ್ಟ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆರೋಪಿ ಕಿರಣ್ ರೆಡ್ಡಿ ಕೊಲೆ ಮಾಡುವ ಉದ್ದೇಶದಿಂದಲೇ ಗಂಭೀರವಾಗಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಪ್ರಸಾದ ರೆಡ್ಡಿ ಕುಸಿದುಬಿದ್ದಿದ್ದಾನೆ. ಆಸ್ಪತ್ರೆ ಸಾಗಿಸುವ ಪ್ರಯತ್ನ ನಡೆಸಲಾಯಿತಾದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಮೃತ ದೇಹ ಕೋಲಾರ ಆರ್. ಎಲ್ ಜ್ವಾಲಪ್ಪ ಶವಾಗಾರಕ್ಕೆ ರವಾನಿಸಲಾಗಿದೆ.

ಜಮೀನು ವಿವಾದ: ಬಡಿಗೆಗಳಿಂದ ಪರಸ್ಪರ ಹೊಡೆದಾಡಿಕೊಂಡ ಎರಡು ಕುಟುಂಬ!

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.