ಮನೆ ಬಿಟ್ಟು ಬಂದಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು, (ನ.11): ಪ್ರೀತಿಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಲ್ಲಟ ಗ್ರಾಮದ ಮಹೇಶ (20) ಮತ್ತು ಅಕ್ಷತಾ (18) ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರಿಂದ ಎರಡೂ ಮನೆಗಳಲ್ಲೂ ಇವರ ಪ್ರೀತಿಗೆ ಮನ್ನಣೆ ಸಿಕ್ಕಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಪುತ್ರನ ಕಾರು ಅಪಘಾತ...!

ಗ್ರಾಮದ ಹೊರವಲಯದ ಜಮೀನಿನಲ್ಲಿ ವಿಷ ಸೇವನೆ ಮಾಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ವೇಳೆ ಮನೆ ಬಿಟ್ಟು ಬಂದಿದ್ದ ಯುವಕ ಯುವತಿ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.