ಬಾಗಲಕೋಟೆ(ಅ.04): ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ.

ಮೃತ ಪ್ರೇಮಿಗಳು ಮೂಲತಃ ಬಾಗಲಕೊಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಆನಂದ್ ಹಾಗೂ ಅಕ್ಷತಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಂತರ್ಜಾತಿ  ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂದು ಮನನೊಂದು ಪ್ರೇಮಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಗಜೇಂದ್ರಗಡ: ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಮೃತ ಆನಂದ್ ಯುವಕ ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಗುತ್ತಿದ್ದ. ಹೀಗಾಗಿ ಮುಧೋಳದಲ್ಲಿ ನಗರದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ, ಇಂದು ಬೆಳಿಗ್ಗೆ ಅದೇ ಕೋಣೆಯಲ್ಲೇ ಆನಂದ್ ಹಾಗೂ ಅಕ್ಷತಾ ನೇಣಿಗೆ ಕೊರಳೊಡ್ಡಿದ್ದಾರೆ. ಈ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.