ರಾಮನಗರ: ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ
ಮೃತರಿಬ್ಬರು ಮೂಲತಃ ನೆಲಮಂಗಲಕ್ಕೆ ಸೇರಿದವರಾಗಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ರಾಮನಗರ(ಆ.13): ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ಕುಂಬಾಪುರ ರೈಲ್ವೆ ಗೇಟ್ ಬಳಿ ನಡೆದಿದೆ.
ಮೃತರನ್ನು ಹರ್ಷವರ್ಧನ್ ಹಾಗೂ ನವ್ಯಶ್ರೀ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಮೂಲತಃ ನೆಲಮಂಗಲಕ್ಕೆ ಸೇರಿದವರಾಗಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು: ಮನನೊಂದ ಯುವಕ ಆತ್ಮಹತ್ಯೆ!
ಶನಿವಾರ ಬೆಳಗ್ಗೆ 6.30ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. ಇಬ್ಬರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.