ವಿಜಯಪುರ, (ಆ.09): ಜಿಲ್ಲೆಯ ಬನಹಟ್ಟಿ ಗ್ರಾಮದ ಬಾವಿಯಲ್ಲಿ ಯುವಕ ಹಾಗೂ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

ಶಿವಕುಮಾರ ಚೌದರಿ (19) ಹಾಗೂ ಶಬಾನಾ ಮುಜಾವರ (16) ಮೃತಪಟ್ಟವರು. ಒಂದೇ  ಗ್ರಾಮದವರಾಗಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ನೀರಿನ ಸಂಪಿನಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಮೃತ ದೇಹ ಪತ್ತೆ

ಇಬ್ಬರ ಪ್ರೀತಿಗೆ ಮನೆಯಲ್ಲಿ ಅನ್ಯ ಧರ್ಮೀಯರು ಎಂಬ ಕಾರಣಕ್ಕೆ ತಮ್ಮ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಭಯದಿಂದ ಒಂದೇ ಭಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ  ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಠಾಣಾ ಪಿಎಸ್ ಐ ರವಿ ಯಡವಣ್ಣವರ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದು,  ಪ್ರಕರಣ ದಾಖಲಿಸಿಕೊಂಡು ತನಿಖೆ ನೆಸಿದ್ದಾರೆ.