ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಸ್ಲೀಪರ್‌ ಬಸ್‌ನಲ್ಲೇ ವಿಷ ಕುಡಿದು ಮಲಗಿದ್ದಾರೆ. ದುರಾದೃಷ್ಟವಶಾತ್ ಯುವತಿ ಮೃತಪಟ್ಟಿದ್ರೆ, ಯುವಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾನೆ. 

ಹಾವೇರಿ ( ಜೂನ್ 6, 2023): ಮದುವೆಗೆ ಕುಟುಂಬಸ್ಥರು ನಿರಾಕರಿಸಿದ್ದಕ್ಕೆ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರೇಮಿಗಳು ವಿಷ ಕುಡಿದು ಮಲಗಿದ್ದಾರೆ ಎಂದು ಬೆಳಕಿಗೆ ಬಂದಿದೆ. ಅಲ್ಲದೆ, ವಿಷ ಕುಡಿದು ಬಸ್‌ನಲ್ಲೇ ಪ್ರಾಣ ಬಿಟ್ಟಿದ್ದಾಳೆ ಯುವತಿ. 5 ದಿನಗಳ ಬಳಿಕ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು ಮೂಲದ 20 ವರ್ಷದ ಯುವತಿ ಹೇಮಾ ಬಿ ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ರು. ಅಖಿಲ್ ಎಂಬ ಬಾಗಲಕೋಟೆ ಮೂಲದ ಯುವಕನ ಜೊತೆ ಹೇಮಾಗೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ರು ಇಬ್ಬರ ಮನೆಯಲ್ಲೂ ಇವರ ಪ್ರೀತಿಗೆ ವಿರೋಧ ವ್ಯಕ್ತವಾಗಿದೆ.

ಇದನ್ನು ಓದಿ: ಕ್ರಿಕೆಟ್‌ ಪಂದ್ಯದ ವೇಳೆ ಬಾಲ್‌ ಮುಟ್ಟಿದ ದಲಿತ ಬಾಲಕನಿಗೆ ಜಾತಿ ನಿಂದನೆ: ಸಂಬಂಧಿಯ ಹೆಬ್ಬೆರಳನ್ನೇ ಕತ್ತರಿಸಿದ ಗ್ರಾಮಸ್ಥರು!

ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ಪ್ರೇಮಿಗಳು ವಿಷ ಕುಡಿದಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್‌ನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾನೆ. ಇನ್ನೊಂದೆಡೆ, ವಿಷ ಕುಡಿದ ಯುವತಿ ಹೇಮಾ ರಾಮಕೃಷ್ಣ ಮೃತಪಟ್ಟಿದ್ದಾಳೆ. 

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಸ್ಲೀಪರ್‌ ಬಸ್‌ನಲ್ಲೇ ವಿಷ ಕುಡಿದು ಮಲಗಿದ್ದಾರೆ. ದುರಾದೃಷ್ಟವಶಾತ್ ಹೇಮಾ ಮೃತಪಟ್ಟಿದ್ದಾರೆ. ಸಾಯೋದಕ್ಕೂ ಮುಂಚೆ ನಮಗೆ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗ್ತಾ ಇದೆವೆ ಎಂದು ಫೋನ್ ಮಾಡಿ ಯುವತಿ ಹೇಳಿಕೊಂಡಿದ್ಳು ಎಂದೂ ತಿಳಿದುಬಂದಿದೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ: ಬಾಯ್‌ಫ್ರೆಂಡ್‌ಗಾಗಿ ಪೊಲೀಸರ ಹುಡುಕಾಟ

ಬಳಿಕ ಲವ್ ಬರ್ಡ್ಸ್ ವಿಷ ಸೇವಿಸ್ರು ಎನ್ನಲಾಗಿದೆ. ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್‌ನವರಿಗೆ ಅನುಮಾನ ಬಂದಿದೆ. ವಿಷದ ವಾಸನೆ ಬಂದ ಹಿನ್ನೆಲೆ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ಮಾಡಿದ್ದಾರೆ. ಆದರೆ ಹುಡುಗಿ ಬದುಕಲಿಲ್ಲ. ಹುಡುಗ ಹುಷಾರಾಗಿದ್ದಾನೆ ಎಂದು ವರದಿಯಾಗಿದೆ. ಇನ್ನು, ಈ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇದೆಂತ ದುರಂತ ಪ್ರೀತಿ! ಎಣ್ಣೆ ಏಟಲ್ಲಿ ಬರ್ತಡೇ ವಿಷ್‌ ಮಾಡಲು ಗರ್ಲ್‌ ಫ್ರೆಂಡ್‌ ಮನೆಗೆ ಹೋಗಿ ಕೊಲೆಯಾದ ಯುವಕ